ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ರಕ್ತದಾನ
K.L.E. Blood donation by the students of Institute of Education College
ಬೆಳಗಾವಿ 11: ತ್ಯಾಗವೀರ ಸಿರಸಂಗಿ ಲಿಂಗರಾಜ ಜಯಂತಿ ಉತ್ಸವದ ಅಂಗವಾಗಿ ಲಿಂಗರಾಜ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು.
ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಭುವನೇಶ್ವರಿ ಪಾಟೀಲ ಹಾಗೂ ಸಿದ್ದಪ್ಪಾ ಪಿ ಹಾಗೂ ದ್ವೀತಿಯ ವರ್ಷದ ಎನ್.ಎಸ್.ಎಸ್. ಹಾಗೂ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ರಕ್ತದಾನ ಮಾಡುವ ಮೂಲಕ ಸಿರಸಂಗಿ ಲಿಂಗರಾಜರಿಗೆ ತಮ್ಮ ಕೃತಜ್ಞತೆಯ ನಮನವನ್ನು ಸಲ್ಲಿಸಿದರು.
ತ್ಯಾಗವೀರ ಸಿರಸಂಗಿ ಲಿಂಗರಾಜ ಜಯಂತಿ ಉತ್ಸವದ ಅಂಗವಾಗಿ ಏರಿ್ಡಸಿದ ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪಾರಿತೋಷಕಗಳನ್ನು ನೀಡಲಾಯಿತು. ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯಗಳಿಸಿ ಪಾರಿತೋಷಕಗಳನ್ನು ಪಡೆದುಕೊಂಡರು. ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸಮೂಹ ಗಾಯನ ಸ್ಪರ್ಧೆ ದ್ವೀತಿಯ , ರೀಲ್ಸ್ ಮೇಕಿಂಗ್ ಸ್ಪರ್ಧೆ ದ್ವೀತಿಯ, ವಚನಗಾಯನ ಸ್ಪರ್ಧೆ, ಚರ್ಚಾ ಸ್ಪರ್ಧೆಯಲ್ಲಿ ತೃತಿಯ ಸ್ಥಾನ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 