ಕೆ.ಎಲ್‌.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ರಕ್ತದಾನ

K.L.E. Blood donation by the students of Institute of Education College

ಬೆಳಗಾವಿ 11:  ತ್ಯಾಗವೀರ ಸಿರಸಂಗಿ ಲಿಂಗರಾಜ ಜಯಂತಿ ಉತ್ಸವದ ಅಂಗವಾಗಿ ಲಿಂಗರಾಜ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ಕೆ.ಎಲ್‌.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. 

ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಭುವನೇಶ್ವರಿ ಪಾಟೀಲ ಹಾಗೂ ಸಿದ್ದಪ್ಪಾ ಪಿ ಹಾಗೂ ದ್ವೀತಿಯ ವರ್ಷದ ಎನ್‌.ಎಸ್‌.ಎಸ್‌. ಹಾಗೂ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ರಕ್ತದಾನ ಮಾಡುವ ಮೂಲಕ ಸಿರಸಂಗಿ ಲಿಂಗರಾಜರಿಗೆ ತಮ್ಮ ಕೃತಜ್ಞತೆಯ ನಮನವನ್ನು ಸಲ್ಲಿಸಿದರು. 

ತ್ಯಾಗವೀರ ಸಿರಸಂಗಿ ಲಿಂಗರಾಜ ಜಯಂತಿ ಉತ್ಸವದ ಅಂಗವಾಗಿ ಏರಿ​‍್ಡಸಿದ ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪಾರಿತೋಷಕಗಳನ್ನು ನೀಡಲಾಯಿತು. ಕೆ.ಎಲ್‌.ಇ. ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯಗಳಿಸಿ ಪಾರಿತೋಷಕಗಳನ್ನು ಪಡೆದುಕೊಂಡರು. ಲಿಖಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸಮೂಹ ಗಾಯನ ಸ್ಪರ್ಧೆ ದ್ವೀತಿಯ , ರೀಲ್ಸ್‌ ಮೇಕಿಂಗ್ ಸ್ಪರ್ಧೆ ದ್ವೀತಿಯ, ವಚನಗಾಯನ ಸ್ಪರ್ಧೆ, ಚರ್ಚಾ ಸ್ಪರ್ಧೆಯಲ್ಲಿ ತೃತಿಯ ಸ್ಥಾನ.