ಕೆ.ಎಮ್.ಜಾನಕಿ ಅವರು ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ಗೆ ಭೇಟಿ
K.M. Janaki visits Dr. D.R. Bendre National Memorial Trust
ಲೋಕದರ್ಶನ ವರದಿ
ಬೆಳಗಾವಿ 07 : ಪ್ರಾದೇಶಿಕ ಆಯುಕ್ತರಾಗಿರುವ ಕೆ.ಎಮ್.ಜಾನಕಿ ಅವರು ಇಂದು ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ಗೆ ಸೌಹಾರ್ದದ ಭೇಟಿ ನೀಡಿ, ಗ್ರಂಥಾಲಯ, ಬೇಂದ್ರೆ ದರ್ಶನ-ಪ್ರದರ್ಶನಾಲಯ, ಆಡಳಿತ ಕಚೇರಿ ಹಾಗೂ ವರಕವಿ ಡಾ.ದ.ರಾ.ಬೇಂದ್ರೆ ನಿವಾಸ ವೀಕ್ಷಿಸಿದರು. ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಅವರು ಟ್ರಸ್ಟ್ನ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಕೆ.ಎಚ್.ಚನ್ನೂರ, ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಟ್ರಸ್ಟಿನ ಸದಸ್ಯರಾದ ಡಾ. ಶರಣಮ್ಮ ಗೊರೆಬಾಳ, ಗಾಯಕಿ ಡಾ.ರೋಹಿಣಿ ಗಂಗಾಧರ ಹಾಗೂ ಟ್ರಸ್ಟ್ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 