ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆ
KCC Saturation Campaign Launched
ಲೋಕದರ್ಶನ ವರದಿ
ಕಾರವಾರ ಜುಲೈ 16: ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಡಿಸಿಸಿ ಸಭೆ ಬುಧವಾರ ನಡೆಯಿತು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕ್ಷ್ ಹಾಗೂ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನವು ಆಗಸ್ಟ್ 14, 2026ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದ್ದು, ಅಭಿಯಾನವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಅರ್ಹ ಎಲ್ಲ ಫಲಾನುಭವಿಗಳಿಗೆ ಬೆಳೆ ವಿಮೆ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ ಅವರು ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನದ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಅಭಿಯಾನದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲೆಯ ಎಲ್ಲ ಬ್ಯಾಂಕ್ಗಳ ಜಿಲ್ಲಾ ಸಂಯೋಜಕರು, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಬೆಳೆ ವಿಮೆ ಪ್ರತಿನಿಧಿಗಳು, ಸಿಎಫ್‌ಎಲ್ ಹಾಗೂ ಎಫ್‌ಎಲ್ಸಿ ಜಿಲ್ಲಾ ಸಂಯೋಜಕರು ಭಾಗವಹಿಸಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 