ಕೆಸಿಸಿಐ : ಯಶವಂತರಾಜ್ ನಾಗಿರೆಡ್ಡಿ ಜಿಲ್ಲಾ ಸಮನ್ವಯ ಸಮಿತಿಯ ಚೇರ್ಮೆನ್
KCCI: Yashwanthraj Nagireddy is the Chairman of the District Coordination Committee
ಹುಬ್ಬಳ್ಳಿ 11: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಜಿಲ್ಲಾ ಸಮನ್ವಯ ಸಮಿತಿಯ ಚೇರ್ಮೆನ್ ಆಗಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಉದಯ ರೇವಣಕರ ಅವರು ಈ ಮಾಹಿತಿ ನೀಡಿದ್ದು, ಇವರ ಅಧಿಕಾರವಧಿಯು 30.9.2026ರ ವರೆಗೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ಯಶವಂತರಾಜ್ ನಾಗಿರೆಡ್ಡಿ ಅವರು, ’ಸಂಸ್ಥೆಯ ಅಭಿವೃದ್ಧಿಗೆ ಹಾಗೂ ಉದ್ಯಮಿಗಳ ಹಿತಕ್ಕಾಗಿ ಶ್ರಮಿಸುತ್ತೇನೆ’ ಎಂದು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ.ಸುರೇಶಬಾಬು, ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 