ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ?

KL Rahul selected for ODI series against England?

ಮುಂಬೈ 11: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ ಕೆ ಎಲ್ ರಾಹುಲ್ ಗೆ  ವಿಚಾರದಲ್ಲಿ ಆಯ್ಕೆ ಸಮಿತಿ ಸಂದೇಶವೊಂದನ್ನು ರವಾನಿಸಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಬಿಸಿಸಿಐ ತನ್ನ ನಿಲುವು ಬದಲಾಯಿಸಿಕೊಂಡಂತೆ ತೋರುತ್ತಿದೆ. ಈ ಹಿಂದೆ ಇಂಗ್ಲೆಂಡ್ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಂತೆ ಕೆಎಲ್ ರಾಹುಲ್ ಬಿಸಿಸಿಐನಿಂದ ವಿರಾಮ ಕೋರಿದ್ದರು ಮತ್ತು ಅಂತೆಯೇ ಆ ಮನವಿಯನ್ನು ಆಯ್ಕೆ ಸಮಿತಿ ಕೂಡ ಒಪ್ಪಿಕೊಂಡಿತು ಎಂದು ವರದಿಯಾಗಿತ್ತು. 

ಆದರೆ ಇದೀಗ ಬಿಸಿಸಿಐ ಆಯ್ಕೆ ಸಮಿತಿ  ಕೆಎಲ್ ರಾಹುಲ್ ಗೆ ಸಂದೇಶವೊಂದನ್ನು ರವಾನಿಸಿದ್ದು.. ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಲಭ್ಯವಿರುವಂತೆ ಸೂಚಿಸಿದೆ ಎನ್ನಲಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಅವರನ್ನು ತಂಡಕ್ಕೆ ಸೇರಿಸಲು ಉತ್ಸುಕವಾಗಿದೆ ಎನ್ನಲಾಗಿದೆ.

ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಅಭ್ಯಾಸವನ್ನು ಪಡೆಯಲು ಬಿಸಿಸಿಐ ಈಗ ಏಕದಿನ ಸರಣಿಯಲ್ಲಿ ಆಡುವಂತೆ ರಾಹುಲ್ ಗೆ ಕೇಳಿಕೊಂಡಿದೆ.

ಇನ್ನು ಆರಂಭಿಕರಾಗಿ, ಮಧ್ಯಮ ಕ್ರಮಾಂಕದಲ್ಲಿ ಆಡುವ ಮತ್ತು ವಿಕೆಟ್ ಕೀಪರ್ ಕೂಡ ಆಗಿರುವ ರಾಹುಲ್ ಈ ಹಿಂದೆ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದರು. ಅದಾಗ್ಯೂ ಆಸಿಸ್ ನೆಲದಲ್ಲಿ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರ ಎಂದೆನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳ 10 ಇನ್ನಿಂಗ್ಸ್‌ಗಳಲ್ಲಿ ರಾಹುಲ್ 30.66 ಸರಾಸರಿಯಲ್ಲಿ 276 ರನ್ ಗಳಿಸಿದ್ದಾರೆ. ಹೀಗಾಗಿ ಅವರ ಮೇಲೆ ಸಂಪೂರ್ಣ ವಿಶ್ವಾಸ ಇರಿಸಿರುವ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಇಂಗ್ಲೆಂಡ್ ಪ್ರವಾಸಕ್ಕೂ ಅವರನ್ನು ಪರಿಗಣಿಸಿದೆ. ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಹಿರಿಯ ಆಟಗಾರನಿಗೆ ಆಯ್ಕೆ ಸಮಿತಿ ಮಣೆ ಹಾಕಿದೆ ಎನ್ನಲಾಗಿದೆ.