ರಾಷ್ಟ್ರಮಟ್ಟದ ಹ್ಯಾಕಥಾನ್ನಲ್ಲಿ ಕೆಎಲ್ಇ ಬಿಸಿಎ ವಿದ್ಯಾರ್ಥಿಗಳ ಸಾಧನೆ
KLE BCA students' achievement at a national-level hackathon
ರಾಷ್ಟ್ರಮಟ್ಟದ ಹ್ಯಾಕಥಾನ್ನಲ್ಲಿ ಕೆಎಲ್ಇ ಬಿಸಿಎ ವಿದ್ಯಾರ್ಥಿಗಳ ಸಾಧನೆ
ಮಹಾಲಿಂಗಪುರ 13: ಸ್ಥಳೀಯ ಕೆಎಲ್ಇ ಸಂಸ್ಥೆಯ ಬಿಸಿಎ ವಿದ್ಯಾರ್ಥಿಗಳು ಪುಣೆಯ ಮರಾಠಾವಾಡಾ ಮಿತ್ರಮಂಡಳ ಇಂಜನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ 24 ಗಂಟೆಗಳ ಹ್ಯಾಕಥಾನ್ನಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ. ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಈರ್ಪ ಮಾಳಿ, ವಿನಯ ಮನ್ಮಿ, ವಿಶಾಲ್ ಕೆ. ಹಾಗೂ ಅಭಿಷೇಕ್ ಎಂ. ಹ್ಯಾತಥಾನ್ನಲ್ಲಿ ಭಾಗವಹಿಸಿ, ತಮ್ಮ ತಾಂತ್ರಿಕ ಜ್ಞಾನ, ಸೃಜನಶೀಲತೆ, ಸಮಸ್ಯೆ ಪರಿಹಾರದ ಸಾಮರ್ಥ್ಯ ಹಾಗೂ ತಂಡದ ಕಾರ್ಯಕ್ಷಮತೆ ಪ್ರದರ್ಶಿಸಿದ್ದಾರೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ತಾಂತ್ರಿಕ ತಜ್ಞರೊಂದಿಗೆ ಸಂವಹನ ನಡೆಸುವ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ ಎಂದು ಕೆಎಲ್ಇ, ಬಿಸಿಎ ಕಾಲೇಜ್ ಸಂಯೋಜಕ ಎಸ್.ಐ.ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 