ಕೆಎಲ್ಇ ಹೇಲ್ತ್- ಗೈಡ್ ನೇರ ಫೋನ್-ಇನ್ ಕಾರ್ಯಕ್ರಮ ವಿಶ್ವ ಅಸ್ಥಮಾ ದಿನ ಕುರಿತು ಜಾಗೃತಿ
KLE Health-Guide direct phone-in program raises awareness about World Asthma Day
ಲೋಕದರ್ಶನ ವರದಿ
ಬೆಳಗಾವಿ 05: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಮಂಗಳವಾರ 5ನೆೆ ಮೇ 2026 ರಂದು ವಿಶ್ವ ಅಸ್ಥಮಾ ದಿನ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯೆ ಮತ್ತು ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ರೆಸ್ಪಿರೇಟರಿ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಭಾಗ್ಯಶ್ರೀ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಸಿ ವಿಶ್ವ ಅಸ್ಥಮಾ ದಿನದ ಮಹತ್ವ, ಅಸ್ಥಮಾ ಕಾಯಿಲೆಯ ಲಕ್ಷಣಗಳು, ಮುನ್ನಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.
ಅಸ್ಥಮಾ ಒಂದು ಗಂಬೀರ ಆರೋಗ್ಯ ಸಮಸ್ಯೆ, ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ, ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೂ ಕೂಡ ಇಂದು ವೇಗವಾಗಿ ಹೆಚ್ಚುತ್ತಿದೆ ಎಂದರು. ಶ್ವಾಸಕೋಶದಲ್ಲಿನ ಸೊಂಕಿನಿಂದ ಅಸ್ಥಮಾ ಉಂಟಾಗುತ್ತದೆ, ಈ ಸೊಂಕಿನ ಪ್ರಮುಖ ಕಾರಣಗಳು ಶ್ವಾಸಕೋಶದಲ್ಲಿ ಫೈಬ್ರೋಸಿಸ್, ಉಸಿರಾಟದ ಪ್ರದೇಶದಲ್ಲಿ ಸೊಂಕು, ಉರಿಯುತ ಮತ್ತು ಅತೀಯಾದ ಲೋಳೆಯ ರಚನೆ ಎನ್ನಲಾಗುತ್ತದೆ. ಇಂದಿನ ದಿನಗಳಲ್ಲಿ ಅಸ್ಥಮಾ ಸಮಸ್ಯೆ ಎನ್ನುವುದು ಕೇವಲ ದೊಡ್ಡವರಲ್ಲಿ ಮಾತ್ರವಲ್ಲ ಮಕ್ಕಳಲ್ಲಿಯೂ ಕೂಡ ಕಾಣಿಸಿಕೊಳ್ಳುತ್ತಿದೆ.
ಪ್ರಮುಖವಾಗಿ ಉಸಿರಾಟದ ವ್ಯವಸ್ಥೆಯಲ್ಲಿ ಏರುಪೇರು ಉಂಟಾಗಿ ಕ್ರಮೇಣವಾಗಿ ಅದು ಅಸ್ಥಮಾ ಸಮಸ್ಯೆಯಾಗಿ ಬದಲಾಗುತ್ತದೆ. ಇನ್ನೂ ಕೇಲವರಿಗೆ ಕೆಮ್ಮಿನ ಸಮಸ್ಯೆಯಿಂದ ಪ್ರಾರಂಭವಾಗಿ ಕೊನೆಗೆ ಅದು ಅಸ್ಥಮಾವಾಗಿ ತಿರುಗುತ್ತದೆ. ಆದ್ದರಿಂದ ಅಸ್ಥಮಾ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡುವಂತ್ತಿಲ್ಲ, ಅಸ್ಥಮಾಗೆ ಸಂಬಂಧ ಪಟ್ಟಂತೆ ರೋಗಲಕ್ಷಣಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಜಾಗೃತಿ ಮೂಡಿಸಿದರು ಮತ್ತು ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತೆಯಲ್ಲಿ ಅಸ್ಥಮಾಗೆ ಲಭ್ಯವಿರುವ ಚಿಕಿತ್ಸೆಗಳ ಕುರಿತು ಮಾಹಿತಿ ಹಂಚಿಕೊಂಡರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 