ಇಂದು ಕೆಎಲ್‌ಇ ಹೇಲ್ತ್-ಗೈಡ ನೇರ ಪೋನ್-ಇನ್ ಕಾರ್ಯಕ್ರಮ
KLE Health-Guide direct phone-in program today
ಬೆಳಗಾವಿ 22 : ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕೆಎಲ್‌ಇ ವಿಶ್ವನಾಥ ಕತ್ತಿ ದಂತ ವಿಜ್ಞಾನ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಸೋಮವಾರ ದಿನಾಂಕ 23 ಫೆಬ್ರುವರಿ 2026 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ರಾಷ್ಟ್ರೀಯ ಪೆರಿಯೊಡಾಂಟಿಸ್ಟ್ ದಿನದ ಅಂಗವಾಗಿ ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗಾವಿಯ ಕೆಎಲ್‌ಇ ವಿಶ್ವನಾಥ ಕತ್ತಿ ದಂತ ವಿಜ್ಞಾನ ಮಹಾವಿದ್ಯಾಲಯದ ಪೆರಿಯೊಡಾಂಟಿಸ್ಟ್ ವಿಭಾಗದ ರೀಡರ್ ಡಾ. ವಿಲಾಸ ಪತ್ತಾರ ಮತ್ತು ಡಾ. ಶೃತಿ ಕರ್ವೆಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 