ಕೆಎಂಸಿಆರ್‌ಐ ನೂತನ ನಿರ್ದೇಶಕರಿಗೆ ಸನ್ಮಾನ
KMCRI's new director felicitated
ಲೋಕದರ್ಶನ ವರದಿ
ಹುಬ್ಬಳ್ಳಿ ೨೪: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಕೆ ಎಂ ಸಿ ಆರ್.ಐ ಗೆ ತೆರಳಿ ಕೆ ಎಂ ಸಿ ಆರ್ ಐ ನಿರ್ದೇಶಕರಾಗಿ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೇವೆ ನೀಡಿ ಸೇವಾ ನಿವೃತ್ತರಾದ, ಫಿಜಿಯಾಲಜಿ ವಿಭಾಗದ ಹಿರಿಯ ಪ್ರಾಧ್ಯಾಪಕ, ಮಾಜಿ ಪ್ರಾಂಶುಪಾಲ ಡಾ. ಕೆ. ಎಫ್ . ಕಮ್ಮಾರ ಅವರಿಗೆ ಹಾಗೂ ನೂತನ ಕೆ ಎಂ ಸಿ ಆರ್ ಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಡಾ ಉದಯ ಬಾಂದೆ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರ್ಪಣೆ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು.
ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ನೂತನ ನಿರ್ದೇಶಕರ ಅವಧಿಯಲ್ಲಿ ರೋಗಿಗಳಿಗೆ ಉತ್ಕöÈಷ್ಟ ವೈದ್ಯಕೀಯ ಸೇವೆ ಲಭಿಸುವಂತಾಗಲಿ ಎಂದು ಹಾಗೂ ಮಾಜಿ ನಿರ್ದೇಶಕರ ನಿವೃತ ಜೀವನ ಸುಖಕರವಾಗಿ ಇರಲೆಂದು ಆಶಯ ವ್ಯಕ್ತಪಡಿಸಿದರು. ಶುಭ ಕೋರಿದರು.
ಸಕ್ಷಮ ಉತ್ತರ ಕರ್ನಾಟಕ ಪ್ರಾಂತದ ಅಧ್ಯಕ್ಷ ಡಾ ಸುನೀಲ್ ಗೋಖಲೆ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ ಎಸ್ ಎಫ್ ಕಮ್ಮಾರ್, ಡಾ ಬಸವರಾಜ್ ಬಳಿಗಾರ್, ವೈದ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಮುಂತಾದವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 