ಪಕ್ಷದ ವಿರುದ್ಧ ಟೀಕೆ: ಡಿಎಂಕೆಯಿಂದ ಕೆ.ಪಿ.ರಾಮಲಿಂಗಂ ಅಮಾನತು

ಚೆನ್ನೈ, ಏ.2,ಪಕ್ಷದ ಮಾಜಿ ಸಂಸದ ಹಾಗೂ ಕೃಷಿ ವಿಭಾಗದ ಕಾರ್ಯದರ್ಶಿ ಕೆ.ಪಿ.ರಾಮಲಿಂಗಂ ಅವರನ್ನು ವಿಪಕ್ಷ ಡಿಎಂಕೆ ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.
ಕೆಲವು ದಿನಗಳ ಹಿಂದೆ ಪಕ್ಷದ ಎಲ್ಲಾ ಹುದ್ದೆಗಳಿಂದ ಅವರನ್ನು ತೆಗೆದುಹಾಕಲಾಗಿತ್ತು. ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಪಕ್ಷಕ್ಕೆ ಅಪಖ್ಯಾತಿ ತರುವ ರೀತಿಯಲ್ಲಿ ವರ್ತಿಸಿದ್ದಕ್ಕಾಗಿ ರಾಮಲಿಂಗಂ ಅವರನ್ನು ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ
ಎಂದು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ ಬಗ್ಗೆ ಸರ್ವ ಪಕ್ಷ ಸಭೆ ಕರೆಯುವಂತೆ ಸ್ಟಾಲಿನ್ ಮಾಡಿದ್ದ ಆಗ್ರಹದ ವಿರುದ್ಧ ಟೀಕೆ ಮಾಡಿದ್ದ ಕಾರಣಕ್ಕೆ ರಾಮಲಿಂಗಂ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ಮುಕ್ತಗೊಳಿಸಲಾಗಿದೆ ಎಂದು ಪಕ್ಷದ ನಿರ್ಧಾರವನ್ನು ಡಿಎಂಕೆ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ಕೆ.ಅಳಗಿರಿ ಬೆಂಬಲಿಸಿದ್ದಾರೆ.ರಾಜ್ಯದಲ್ಲಿ ಕೊರೋನವೈರಸ್ ಹರಡುವುದನ್ನು ನಿಭಾಯಿಸುವ ಬಗ್ಗೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎಲ್ಲ ಪಕ್ಷದ ಮುಖಂಡರ ಸಭೆ ಕರೆಯಿರಿ ಎಂದು ಸ್ಟಾಲಿನ್ ಅವರು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿಯನ್ನು ಒತ್ತಾಯಿಸಿದ್ದರು. ಆದರೆ ರಾಮಲಿಂಗಂ ಇದರ ವಿರುದ್ಧ ಟೀಕೆ ಮಾಡುವ ಮೂಲಕ ಹೈಕಮಾಂಡ್‌ನಿಂದ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ.