ಅಪಘಾತದಲ್ಲಿ ಕೆಪಿಸಿ ನೌಕರ ಸಾವು
KPC Employee Dies in Road Accident
ದಾಂಡೇಲಿ, ಆ. 18: ಪತ್ನಿಯನ್ನು ಕರೆತರಲು ಗಣೇಶಗುಡಿಯಿಂದ ದಾಂಡೇಲಿಗೆ ಕಾರಿನಲ್ಲಿ ತೆರಳುತ್ತಿದ್ದ ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿ) ನೌಕರರೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ಜೊಯಿಡಾ ತಾಲೂಕಿನ ಉಸೋಡಾ ಗ್ರಾಮದ ಸಮೀಪ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಗಣೇಶಗುಡಿಯಲ್ಲಿ ಕೆಪಿಸಿಯಲ್ಲಿ ಉದ್ಯೋಗಿಯಾಗಿದ್ದ ಮಲ್ಲಿಕಾರ್ಜುನ ರಾವ್ (40) ಎಂದು ಗುರುತಿಸಲಾಗಿದೆ. ನ್ಯಾಯವಾದಿಯಾಗಿರುವ ತಮ್ಮ ಪತ್ನಿಯನ್ನು ಕರೆತರಲು ಅವರು ಗಣೇಶಗುಡಿಯಿಂದ ದಾಂಡೇಲಿಯತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಉಸೋಡಾ ಗ್ರಾಮದ ಬಳಿ ಸಾಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಕಂದಕಕ್ಕೆ ಉರುಳಿದೆ. ಅಪಘಾತದ ಮಾಹಿತಿ ತಿಳಿದ ಕೆಪಿಸಿ ನೌಕರರು ಸ್ಥಳಕ್ಕೆ ತೆರಳಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ರಾವ್ ಅವರನ್ನು ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.
ಮಲ್ಲಿಕಾರ್ಜುನ ರಾವ್ ಅವರ ನಿಧನದ ಸುದ್ದಿ ತಿಳಿದು ಕುಟುಂಬಸ್ಥರು ಹಾಗೂ ಕೆಪಿಸಿ ಸಹೋದ್ಯೋಗಿಗಳು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 