ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು, ಮಾರ್ಚ್‌ 28,ಕೊವಿದ್ -19 ಲಾಕ್‌ಡೌನ್ ನಡುವೆ ತಮ್ಮ ಗ್ರಾಮಗಳಿಗೆ ನೂರಾರು ಕಿಲೋಮೀಟರ್ ನಡೆದು ಹೋಗುತ್ತಿರುವ ವಲಸೆ ಕಾರ್ಮಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.ತಮ್ಮ ಸ್ವಗ್ರಾಮಗಳಿಗೆ ನೂರಾರು ಮೈಲು ನಡೆದುಕೊಂಡು ಹೋಗುತ್ತಿರುವ ಬಡ ವಲಸೆ ಕಾರ್ಮಿಕರ ದುಃಸ್ಥಿತಿಯ ಬಗ್ಗೆ ಗಮನ ಸೆಳೆದಿರುವ ಶಿವಕುಮಾರ್, ತೊಂದರೆಗೆ ಸಿಲುಕಿರುವ ನಮ್ಮ ಜನರನ್ನು ಕೈಬಿಡಬಾರದು. ಸಂಕಷ್ಟಕ್ಕೆ ಸಿಲುಕಿದವರಿಗೆ ಸಾರಿಗೆ ಅಧಿಕಾರಿಗಳೂ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ಸಾಕಷ್ಟು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಕರೋನವೈರಸ್ ಉಲ್ಬಣ ಹಿನ್ನೆಲೆಯಲ್ಲಿ 21 ದಿನಗಳ ದೇಶವ್ಯಾಪಿ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಖ್ಯವಾಗಿ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬಗಳನ್ನು ಒಳಗೊಂಡ ನೂರಾರು ತಮ್ಮ ಸ್ವಂತ ಊರುಗಳಿಗೆ ಕಾಲ್ನಡಿಗೆಯಲ್ಲೇ ಮರಳುತ್ತಿದ್ದಾರೆ.