ಬೆಂಗಳೂರು, ಡಿ. 19 ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ಮೆನನ್ ನಿವಾಸದ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ಕೈಗೊಂಡಿದೆ. ಕೆಪಿಎಲ್ ಫೈನಲ್ಸ್‌ನಲ್ಲಿ ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಫಿಕ್ಸಿಂಗ್ ನಡೆದಿದೆ ಎನ್ನಲಾಗಿದೆ. ಕಳೆದ ವರ್ಷವೂ ಫಿಕ್ಸಿಂಗ್ ನಡೆದಿತ್ತು ಎನ್ನಲಾಗಿದೆ. ಇದುವರೆಗೆ ಕೆಪಿಎಲ್ ತಂಡಗಳ ಸುತ್ತಲೇ ನಡೆಯುತ್ತಿದ್ದ ತನಿಖೆ ಕೆಎಸ್‌ಸಿಎ ಅಂಗಣಕ್ಕೂ ಪ್ರವೇಶಿಸಿದೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರಿನಲ್ಲಿರುವ ಕೆಎಸ್‌ಸಿಎ ಕಾರ್ಯದರ್ಶಿ ಮನೆಗೂ ಸಿಸಿಬಿ ಪೊಲೀಸರು ದಾಳಿ ನಡೆದಿದೆ.