ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ : ಇಬ್ಬರು ಆಟಗಾರರ ಬಂಧನ

ಬೆಂಗಳೂರು, ನ. 7:     ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೆ ಪ್ರಮುಖ ಬಳ್ಳಾರಿ ತಂಡದ ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ತಂಡ ನಾಯಕ ಸಿ.ಎಂ.ಗೌತಮ್ ಹಾಗೂ ಅಬ್ರಾರ್ ಖಾಜಿ ಬಂಧಿತರು.  2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಬಳ್ಳಾರಿ ಹಾಗೂ ಹುಬ್ಬಳ್ಳಿ ತಂಡದ ನಡುವೆ ನಡೆದ ಅಂತಿಮ ಪಂದ್ಯದಲ್ಲಿ 20 ಲಕ್ಷ ರೂ.ಗೆ ಮ್ಯಾಚ್ ಫಿಕ್ಸಿಂಗ್ ನಡೆದಿದ್ದು, ನಿಧಾನವಾಗಿ ಬ್ಯಾಟಿಂಗ್ ಮಾಡಲು ಇಬ್ಬರೂ ಹಣ ಪಡೆದಿದ್ದರು ಎಂಬುದು ತನಿಖೆಯಿಂದ ಬಯಲಿಗೆ ಬಂದಿದೆ.  ಬಂಧಿತ ಆಟಗಾರ ಸಿ.ಎಂ.ಗೌತಮ್ ರಣಜಿ, ಐಪಿಎಲ್ನ ಆರ್ಸಿಬಿ, ಮುಂಬೈ ಇಂಡಿಯನ್ಸ್ ಹಾಗೂ ದೆಹಲಿ ಡೇರ್ ಡೆವಿಲ್ಸ್ ತಂಡದ ಪರವಾಗಿ ಆಡಿದ್ದರು. ಅಬ್ರಾರ್ ಖಾಜಿ ಕರ್ನಾಟಕದ ಪರವಾಗಿ ರಣಜಿ ಪಂದ್ಯದಲ್ಲಿ ಆಡಿದ್ದರು. ಅವರು ಈಗ ಮಿಜೋರಾಂ ತಂಡದ ಪರವಾಗಿ ಆಡುತ್ತಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಇಬ್ಬರೂ ಆಟಗಾರರನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.  2019ರ ಆಗಸ್ಟ್ 31ರಂದು ಮೈಸೂರಿನ ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಶ್ರಿ?ಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆದ ಕೆಪಿಎಲ್ ಫೈನಲ್ ಪಂದ್ಯವೇ ಫಿಕ್ಸ್ ಆಗಿತ್ತು ಎಂಬ ಆರೋಪದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.  ಈ ಎರಡು ತಂಡದ ಆಟಗಾರರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. 2015ರಿಂದ ಕೆಪಿಎಲ್ನಲ್ಲಿ ಆಡುತ್ತಿರುವ ನಿಶಾಂತ್, ಹುಬ್ಬಳ್ಳಿ ಟೈಗರ್ಸ, ಮಂಗಳೂರು ಹಾಗೂ ಶಿವಮೊಗ್ಗ ತಂಡದಲ್ಲಿ ಆಡಿದ್ದಾರೆ. 2018ರ ಕೆಪಿಎಲ್ ನಲ್ಲಿ ಮೆ?ಸೂರಿನ ಶ್ರಿ?ಕಂಠದತ್ತ ನರಸಿಂಹ ರಾಜ ಒಡೆಯರ್ ಮೆ?ದಾನದಲ್ಲಿ ನಡೆದ ಹುಬ್ಬಳ್ಳಿ ಟೈಗರ್ಸ- ಬೆಂಗಳೂರು ಬ್ಲಾಸ್ಟರ್ಸ್ ನಡುವಿನ ಪಂದ್ಯ ಫಿಕ್ಸ್ ಮಾಡಿದ ಆರೋಪವಿದೆ. ಶಿವಮೊಗ್ಗ, ಬೆಳಗಾವಿ, ಬೆಂಗಳೂರು ಸೇರಿದಂತೆ ವಿವಿಧ ತಂಡಗಳ 34 ಆಟಗಾರರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಕೆಪಿಎಲ್ ಜಾರಿಯಲ್ಲಿರುವಾಗಲೇ ಬೆಳಗಾವಿ ತಂಡದ ಮಾಲೀಕ ಅಲಿ ಅವರು ನಿಯಮ ಮೀರಿ ಬುಕ್ಕಿಗಳ ಜೊತೆ ಸಂಪರ್ಕ ಸಾಧಿಸಿದ್ದರು ಎಂಬ ಆರೋಪದ ಬಗ್ಗೆಯೂ ತನಿಖೆ ಮುಂದುವರಿದಿದೆ. ಈ ಪಂದ್ಯ ನಡೆಯುವ ವಾರಕ್ಕೂ ಮುಂಚೆ ಮೆ?ಸೂರಿನ ಹೊ?ಟೆಲ್ವೊಂದರಲ್ಲಿ ಬುಕ್ಕಿ ಮನೊ?ಜ್ನನ್ನು ಸಂರ್ಪಸಿದ್ದ ನಿಧಾನಗತಿಯಲ್ಲಿ ಆಡುವುದಕ್ಕಾಗಿ 5 ಲಕ್ಷ ರೂ. ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ.