ಕೆಪಿಎಸ್ಸಿ ಇಲಾಖೆ ಪರೀಕ್ಷೆ: ಸುಗಮ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಡಿಸಿ ಸೂಚನೆ
KPSC Departmental Exams: DC directs officials to take necessary measures for smooth conduct
ಲೋಕದರ್ಶನ ವರದಿ
ಬಾಗಲಕೋಟೆ 13: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜುಲೈ 17ರಿಂದ 19ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಮೊದಲ ಅಧಿವೇಶನದ ಇಲಾಖೆ ಪರೀಕ್ಷೆಗಳನ್ನು ಯಾವುದೇ ಲೋಪವಿಲ್ಲದೆ ಸುಸೂತ್ರವಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಇಲಾಖೆ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, ಅಭ್ಯರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.
ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಮುಂಚಿತವಾಗಿ ಪರೀಶೀಲಿಸಿ, ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗಳು ಸಂಪೂರ್ಣ ಪಾರದರ್ಶಕ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಯಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆ ಸಮರ್ಕವಾಗಿ ಕಲ್ಪಿಸಿ, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹಾಜರಾಗಿ ತಮ್ಮ ಜವಾಬ್ದಾರಿಗಳನ್ನು ಸಮರ್ಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಇಳಕಲ್ ಡಯಟ್ ಪ್ರಾಚಾರ್ಯ ಸಲೀಂ ಪಾಷಾ ಅವರು ಪರೀಕ್ಷಾ ಸಿದ್ಧತೆ ಕುರಿತು ಸಭೆಗೆ ಮಾಹಿತಿ ನೀಡಿದರು. ಪರೀಕ್ಷೆಗಳು ಬೆಳಗ್ಗೆ ಹಾಗೂ ಮಧ್ಯಾಹ್ನದ ಎರಡು ಅವಧಿಗಳಲ್ಲಿ ನಡೆಯಲಿವೆ.
ಜುಲೈ 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ಅಕೌಂಟ್ಸ್ ಲೋಯರ್, ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಜನರಲ್ ಭಾಗ-2 ಪರೀಕ್ಷೆ ನಡೆಯಲಿದೆ. ಜುಲೈ 18ರಂದು ಬೆಳಗ್ಗೆ ಅಕೌಂಟ್ಸ್ ಹೈಯರ್ ಪತ್ರಿಕೆ-1 ಹಾಗೂ ಮಧ್ಯಾಹ್ನ ಅಕೌಂಟ್ಸ್ ಹೈಯರ್ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ. ಜುಲೈ 19ರಂದು ಬೆಳಗ್ಗೆ ಜನರಲ್ ಲಾ ಭಾಗ-1 ಪತ್ರಿಕೆ-1 ಹಾಗೂ ಮಧ್ಯಾಹ್ನ ಜನರಲ್ ಲಾ ಭಾಗ-1 ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹೇಶಕುಮಾರ ಮಾಲಗತ್ತಿ, ತಹಶೀಲ್ದಾರ್ ವಾಸುದೇವ ಸ್ವಾಮಿ, ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕ ಶರಣಬಸಪ್ಪ ಕುಂಬಾರ ಸೇರಿದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ 