ಬೆಂಗಳೂರು, ಜೂ.10,ಪಕ್ಷದ ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವರು ಮತ್ತು ನನ್ನ ಆತ್ಮೀಯರೂ ಆದ ಈಶ್ವರಪ್ಪನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಕೋರಿದ್ದಾರೆ.ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟ್ವೀಟ್ ಮಾಡಿ, ನಮ್ಮ ಪಕ್ಷದ ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಾಡಿನ ಸೇವೆಗಾಗಿ ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಹರಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.ಸಚಿವ ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿ, ಆತ್ಮೀಯ ಹಿತೈಷಿಗಳು, ಬಿಜೆಪಿಯ ಹಿರಿಯ ನಾಯಕರು ಹಾಗೂ ಸಂಪುಟ ಸಹೋದ್ಯೋಗಿ ಕೆ.ಎಸ್. ಈಶ್ವರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.ಭಗವಂತನ ಆಶೀರ್ವಾದ ಸದಾ ನಿಮ್ಮೊಂದಿಗಿರಲಿ ಎಂದು ಶುಭ ಹಾರೈಸಿದ್ದಾರೆ.