ಕೆಎಸ್‌ಆರ್‌ಟಿಸಿ ಬಸ್- ಬೈಕ್‌ ಮುಖಾಮುಖಿ ಡಿಕ್ಕಿ: ಮೂವರು ಸಾವು

KSRTC bus-bike head-on collision: Three killed

ಉತ್ತರ ಕನ್ನಡ 31: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಬೈಕ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.