ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ : ಹಲವರಿಗೆ ಗಂಭೀರ ಗಾಯ

ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ : ಹಲವರಿಗೆ ಗಂಭೀರ ಗಾಯ   KSRTC bus collides with lorry: Several seriously injured

ದೇವರಹಿಪ್ಪರಗಿ 04: ಪಟ್ಟಣದ ಹೊರವಲಯದಲ್ಲಿರುವ ರಾ.ಹೇ-50ರಲ್ಲಿ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ.  

ವಿಜಯಪುರದಿಂದ ಸಿಂದಗಿಗೆ ಹೋಗುವ ಮಾರ್ಗದ ಮಧ್ಯೆ ತುಕಾಲಿ ಡಾಬಾ ಹತ್ತಿರ ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ಮೆಕ್ಕೆಜೋಳ ತುಂಬಿಕೊಂಡು ಹೋಗುವ ಲಾರಿಗೆ  ಕೆಎಸ್ಸಾರ್ಟಿಸಿ ಬಸ್(ವಿಜಯಪುರ ಡಿಪೋ-2) ಡಿಕ್ಕಿ ಹೊಡೆದು ಹಲವರಿಗೆ ಗಂಭೀರ ಗಾಯಗಳಾಗಿದ್ದು. ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರು ವಿಜಯಪುರದಿಂದ ಸಿಂದಗಿಗೆ ಬರುವ ಮಾರ್ಗದಲ್ಲಿ ಘಟನೆ ನಡೆದಿದ್ದು ಕಂಡು ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ವಿಜಯಪುರ, ಸಿಂದಗಿ ಹಾಗೂ ದೇವರಹಿಪ್ಪರಗಿ ಸರ್ಕಾರಿ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ಕಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

ಸ್ಥಳಕ್ಕೆ ದೇವರಹಿಪ್ಪರಗಿ ಪಿಎಸ್‌ಐ ಸಚಿನ್ ಆಲಮೇಲಕರ್ ಅವರ ನೇತೃತ್ವದಲ್ಲಿ ಪೋಲಿಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ.  

ದೇವರಹಿಪ್ಪರಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ಇನ್ನು ದಾಖಲಾಗಿಲ್ಲ.