ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದೆ
KSRTC bus driver loses control and veers off the road
ಶಿರಹಟ್ಟಿ 03: ತಾಲೂಕಿನ ಮಜ್ಜೂರಹಿಮಾಚೇನಹಳ್ಳಿ ಮಧ್ಯದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಬಸ್ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ತಪ್ಪಿದೆ.
ಗದಗ ನಗರದಿಂದ ಕೇರಳ್ಳಿ ತಾಂಡಾಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದ ಪರಿಣಾಮ ಈ ಘಟನೆ ಸಂಭವಿಸಿದೆ. ಬಸ್ ಉರುಳಿದ ತಕ್ಷಣ ಸ್ಥಳೀಯರು ಹಾಗೂ ಸರ್ವೇ ಸಾಮಾನ್ಯರು ನೆರವಿಗೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದು ತಕ್ಷಣವೇ ಶಿರಹಟ್ಟಿ ತಾಲೂಕು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಗಮನಾರ್ಹ. ಘಟನಾ ಸ್ಥಳಕ್ಕೆ ಶಿರಹಟ್ಟಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.
ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಎಲ್ಲರಿಗೂ ಅಗತ್ಯವಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಾಲೂಕು ಆಸ್ಪತ್ರೆ ಮೂಲಗಳು ತಿಳಿಸಿವೆ.ಅಪಘಾತದಿಂದ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ ನಂತರ ಸಂಚಾರವನ್ನು ಸರಳಗೊಳಿಸಲಾಗಿದೆ.ಶಿರಹಟ್ಟಿ ತಾಲೂಕಿನ ಮಜ್ಜೂರಹಿಮಾಚೇನಹಳ್ಳಿ ಮಧ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆ ಪಕ್ಕಕ್ಕೆ ಉರುಳಿದ ರಸ್ತೆ ಪಕ್ಕಕ್ಕೆ ಉರುಳಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 