ಸರ್ಕಾರದ ನಿಲುವಿಗೆ ಸಿಡಿದೆದ್ದ ಕೆಎಸ್‌ಆರ್ಟಿಸಿ ಸಿಬ್ಬಂದಿ‘ ಏಸ್ಮಾ ಬೆದರಿಕೆಗೆ ಜಗ್ಗುವುದಿಲ್ಲ; 19ರ ರಾತ್ರಿಯಿಂದ ಬಸ್ ಬಂದ್‌’

ಸರ್ಕಾರದ ನಿಲುವಿಗೆ ಸಿಡಿದೆದ್ದ ಕೆಎಸ್‌ಆರ್ಟಿಸಿ ಸಿಬ್ಬಂದಿ‘ ಏಸ್ಮಾ ಬೆದರಿಕೆಗೆ ಜಗ್ಗುವುದಿಲ್ಲ; 19ರ ರಾತ್ರಿಯಿಂದ ಬಸ್ ಬಂದ್‌’ KSRTC staff, angry at the government's stance, 'will not bow to ASMA threats; bus shutdown from the

ಬಳ್ಳಾರಿ 16:  ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಕೆಎಸ್‌ಆರ್ಟಿಸಿ ಹಾಗೂ ಇತರೆ ಸಾರಿಗೆ ನಿಗಮಗಳ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಏಸ್ಮಾ ಕಾಯ್ದೆ ಜಾರಿಗೊಳಿಸಿದರೂ ನಾವು ಹೆದರುವ ಪ್ರಶ್ನೆಯೇ ಇಲ್ಲ. ನೌಕರರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯುತ್ತದೆ” ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅದಿಮೂರ್ತಿ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಹಲವು ತಿಂಗಳುಗಳಿಂದ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಮಸ್ಯೆ ಪರಿಹಾರಕ್ಕೆ ಗಂಭೀರವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.“ಸಾರಿಗೆ ನೌಕರರಿಗೆ 38 ತಿಂಗಳ ಬಾಕಿ ವೇತನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು.

ಜೊತೆಗೆ ಕನಿಷ್ಠ 25 ಶೇಕಡಾ ವೇತನ ಹೆಚ್ಚಳ ಮಾಡಬೇಕು. ಆದರೆ ಸರ್ಕಾರ ಕೇವಲ 12.5 ಶೇಕಡಾ ವೇತನ ಹೆಚ್ಚಳ ಘೋಷಣೆ ಮಾಡುವ ಮೂಲಕ ಸಿಬ್ಬಂದಿಯ ಕಣ್ಣೊರೆಸುವ ಕೆಲಸ ಮಾಡುತ್ತಿದೆ. ಈ ಪ್ರಸ್ತಾವನೆಯನ್ನು ನಾವು ಯಾವ ಕಾರಣಕ್ಕೂ ಒಪ್ಪುವುದಿಲ್ಲ” ಎಂದು ಸ್ಪಷ್ಟಪಡಿಸಿದರು.ಸಾರಿಗೆ ನೌಕರರು ರಾಜ್ಯದ ಜನತೆಗೆ ನಿರಂತರ ಸೇವೆ ಸಲ್ಲಿಸುತ್ತಿದ್ದು, ಸಂಕಷ್ಟದ ಸಂದರ್ಭಗಳಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ. ಆದರೂ ಅವರ ಪರಿಶ್ರಮಕ್ಕೆ ತಕ್ಕ ಗೌರವ ಹಾಗೂ ಸೌಲಭ್ಯ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.“ನಮ್ಮ ಹೋರಾಟವು ಕೇವಲ ವೇತನಕ್ಕಾಗಿ ಮಾತ್ರವಲ್ಲ; ನೌಕರರ ಬದುಕಿನ ಭದ್ರತೆ ಮತ್ತು ಗೌರವಕ್ಕಾಗಿ ನಡೆಯುತ್ತಿದೆ. ಸರ್ಕಾರ ಮಾತುಕತೆಗೆ ಮುಂದಾಗಿ ಸಮಸ್ಯೆ ಬಗೆಹರಿಸಬೇಕಿತ್ತು. ಆದರೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ” ಎಂದು ದೂರಿದರು.

ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಏಸ್ಮಾ) ಜಾರಿಗೊಳಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ನೌಕರರನ್ನು ಬೆದರಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.ಮೇ 19ರ ರಾತ್ರಿ ????ೇ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ ಅವರು, “ಬಸ್ ಬಂದ್ನಿಂದ ಸಾರ್ವಜನಿಕರಿಗೆ ತೊಂದರೆ ಆಗಬಹುದು. ಆದರೆ ಈ ಪರಿಸ್ಥಿತಿಗೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರವೇ ಹೊರಬೇಕು” ಎಂದರು.ಈ ವೇಳೆ ರಾಜ್ಯದ ಜನತೆಗೆ ಪ್ರತಿಭಟನೆ ಹಾಗೂ ಬಸ್ ಬಂದ್ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಸಾರಿಗೆ ನೌಕರರು ಕರಪತ್ರಗಳನ್ನು ಬಿಡುಗಡೆ ಮಾಡಿದರು. ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.