ಬೆಂಗಳೂರು, ಫೆ.18, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಿರುವ ಭಾರತದ ಪ್ರವಾಸವನ್ನು ಲೇವಡಿ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ!. ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ ಎಂಬುದನ್ನುಪ್ರಧಾನಿ ಅವರೇ ಹೇಳಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಕುಟುಕಿದ್ದಾರೆ.ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಮುಖವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ಗೆ ಟ್ರಂಪ್ ಭೇಟಿ ನೀಡಲಿದ್ದು, ಅಹಮದಾಬಾದ್ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರ ಸಾಬರಮತಿ ಆಶ್ರಮಕ್ಕೂ ಭೇಟಿ ನೀಡಲಿದ್ದಾರೆ.