ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಕರವೇ ಆಗ್ರಹ
KaRaVe demands that the taluk be declared drought-hit
ಯಲಬುರ್ಗಾ, ಆ.29: ಪ್ರಸಕ್ತ ಸಾಲಿನಲ್ಲಿ ಸಮರ್ಕ ಮಳೆಯಾಗದೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸರ್ಕಾರದ ಬರ ಪರಿಹಾರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರಾಜಶೇಖರ ಶ್ಯಾಗೋಟಿ ಆಗ್ರಹಿಸಿದರು.
ಪಟ್ಟಣದ ಚೆನ್ನಮ್ಮ ವೃತ್ತದ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಶೀಲ್ದಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಪರೀಶೀಲಿಸಿ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದೆ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಕೇವಲ ಮೂರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಯಲಬುರ್ಗಾ ತಾಲೂಕನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಇಲ್ಲಿನ ರೈತರಲ್ಲಿ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 