ಅಕ್ರಮ ಕಟ್ಟಡಗಳ ವಿರುದ್ಧ ಕರವೇ ಪ್ರತಿಭಟನೆ
KaRaVe protests against illegal buildings
ಕಾರವಾರ 21: ಕಾರವಾರ ನಗರ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರವೇ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅಕ್ಷಯ್ ಎಸ್. ನಾಗೇಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಪರವಾನಗಿ ನೀಡುವ ಹಾಗೂ ನಿಯಮಬಾಹಿರ ಕಾಮಗಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸದಾಶಿವಗಡ ಭಾಗದಲ್ಲಿ ಮಂಜೂರಾದ ನಕ್ಷೆ ಹಾಗೂ ಪರವಾನಗಿಗೆ ವಿರುದ್ಧವಾಗಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗುತ್ತಿದೆ. ಕೆಲ ಕಟ್ಟಡಗಳಿಗೆ ಜಿ+4 ಮಹಡಿಗಳವರೆಗೆ ಅನುಮತಿ ಇದ್ದರೂ ಜಿ+6ರವರೆಗೆ ನಿರ್ಮಿಸಲಾಗಿದೆ ಎಂದು ಕರವೇ ಆರೋಪಿಸಿತು. ಪಾರ್ಕಿಂಗ್ಗೆ ಮೀಸಲಾದ ಸ್ಥಳಗಳನ್ನು ಸಹ ಇತರ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ದೂರಿತು.
ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಂಬಂಧಪಟ್ಟ ಪಂಚಾಯಿತಿಗೆ ನೋಟಿಸ್ ನೀಡಿದ್ದರೂ ಕಾಮಗಾರಿ ಮುಂದುವರಿಯಲು ಅವಕಾಶ ನೀಡಲಾಗಿದೆ ಎಂದು ಸಂಘಟನೆ ಆರೋಪಿಸಿತು. ಜಿಲ್ಲಾಡಳಿತ ಸಮಗ್ರ ಪರೀಶೀಲನೆ ನಡೆಸಿ, ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
ಕರ್ತವ್ಯಲೋಪ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಯಿತು. ಶಾಶ್ವತ ಪರಿಹಾರ ದೊರೆಯದಿದ್ದರೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 