ಗ್ರಾಮೀಣ ಪ್ರದೇಶಕ್ಕೆ ಬಸ್ ಸೌಲಭ್ಯ, ಬಸ್ ಡಿಪೋ ಸ್ಥಾಪನೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
KaRaVe protests demanding bus services and the establishment of a bus depot for rural areas
ದೇವರಹಿಪ್ಪರಗಿ 22 : ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಕ ಸಾರಿಗೆ ಸೌಲಭ್ಯ ಕಲ್ಪಿಸುವುದು ಹಾಗೂ ತಾಲೂಕು ಕೇಂದ್ರ ದೇವರಹಿಪ್ಪರಗಿ ಪಟ್ಟಣದಲ್ಲಿ ಬಸ್ ಡಿಪೋ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕದ ಅಧ್ಯಕ್ಷರಾದ ರಹೀಮಾನ್ ಕನಕಲ್ ಅವರ ನೇತೃತ್ವದಲ್ಲಿ ಮಂಗಳವಾರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಸಾರಿಗೆ ಸಮಸ್ಯೆ ಎದುರಿಸುತ್ತಿದ್ದು, ಹಲವು ಗ್ರಾಮಗಳಿಗೆ ಸಮರ್ಕ ಬಸ್ ಸಂಚಾರವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
ಕರವೇ ಮುಖಂಡ ಶಿವರಾಜ ತಳವಾರ ಸೇರಿದಂತೆ ಹಲವಾರು ಜನ ಮುಖಂಡರು ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಬರುವಂತ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರವೇ ಮುಖಂಡರು ಒತ್ತಾಯಿಸಿದರು.ಇದೇ ಸಂದರ್ಭದಲ್ಲಿ ತಾಲೂಕ ಪ್ರ.ಕಾ ಅಮೀದ ಮುಲ್ಲಾ, ಉಪಾಧ್ಯಕ್ಷ ಅಬೂಬಕರ ಯಲಗಾರ, ಕಾರ್ಮಿಕ ಘಟಕದ ಉಪಾಧ್ಯಕ್ಷ ಅಜೀಮ್ ಪಟೇಲ, ಪಂಚ ಸೇನಾ ತಾಲೂಕ ಅಧ್ಯಕ್ಷರು ಸಾಹೇಬಗೌಡ ಬಿರಾದಾರ, ಕರವೇ ಮುಖಂಡರುಗಳಾದ ಮಲ್ಲಿಕಾರ್ಜುನ ಬಿರಾದಾರ, ಯಾಕೋಬ ಶಹಪೂರ, ನಬಿಲಾಲ ಚಿಕ್ಕಸಿಂದಗಿ ಸೇರಿದಂತೆ ಕರವೇ ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 