ಯಾವ ಪುರುಷಾರ್ಥಕ್ಕೆ ಸಾವಿರ ದಿನಗಳ ಸಂಭ್ರಮ: ಸರ್ಕಾರದ ವಿರುದ್ಧ ಕಡಾಡಿ ಕಿಡಿ
Kadadi sparks fire against the government
ಲೋಕದರ್ಶನ ವರದಿ
ಮೂಡಲಗಿ 14: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳಾಗಿವೆ. ಇಂದು ಹಾವೇರಿಯಲ್ಲಿ ಬೃಹತ್ ಪ್ರಮಾಣದ ಸಾವಿರ ದಿನಗಳ ಸಂಭ್ರಮಾಚರಣೆ ಸಮಾವೇಶ ನಡೆಸಲಾಗುತ್ತಿದೆ. ಇದು ಯಾವ ಪುರುಷಾರ್ಥಕ್ಕೆ ? ಈ ಸಮಾವೇಶ ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದರು.
ಶನಿವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ 3731ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ, ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಹಾವೇರಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಕಿಡಿ ಕಾರಿದರು. 2,500 ಕೋಟಿ ರೂ.ಗಳ ಅಬಕಾರಿ ಹಗರಣ, 5,000 ಕೋಟಿ ರೂ.ಗಳ ಗೃಹಲಕ್ಷ್ಮಿ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾರ್ಮಿಕ ಇಲಾಖೆ ಕಿಟ್ ಹಗರಣ, ಮೈಸೂರಿನ ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಗಳ ಹಣವನ್ನು ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಳಕೆಯಾಗಿದೆ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿದ್ದ 14,730 ಕೋಟಿ ರೂ.ಗಳ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ. ಇದರಿಂದ ಶೋಷಿತ ಜನಾಂಗಕ್ಕೆ ಅನ್ಯಾಯವಾಗಿದೆ. ಶೋಷಿತ ವರ್ಗಗಳ ಅಭಿವೃದ್ದಿಗಾಗಿ ಸ್ಥಾಪಿಸಲ್ಪಟ್ಟ 10 ಕ್ಕೂ ಹೆಚ್ಚು ನಿಗಮಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಲಾರದ ಶೋಚನೀಯ ಸ್ಥಿತಿ ಎಂದರಲ್ಲದೇ ಅಲ್ಪಸಂಖ್ಯಾಂತ ಅಭಿವೃದ್ದಿ ನಿಗಮದಲ್ಲಿ ಸಾಲ ಪಡೆದವರ ಬಡ್ಡಿ ಮನ್ನಾ ಮಾಡುವ ಮೂಲಕ ತುಷ್ಠಿಕರಣ ನೀತಿಯನ್ನು ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭ್ರಷ್ಟಾಚಾರ, ಆಡಳಿತ ವೈಫಲ್ಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಹಗರಣಗಳ ಸರಮಾಲೆ ಈ ಎಲ್ಲದಕ್ಕೂಇಂದಿನ ಸಮಾವೇಶ ರಾಜ್ಯದ ಜನರಿಗೆ ಉತ್ತರ ನೀಡುವಿರಾ?.... ಯಾವ ಪುರುಷಾರ್ಥಕ್ಕೆ? ಈ ಸಮಾವೇಶ ಎಂದು ಸಂಸದ ಈರಣ್ಣ ಕಡಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 