ಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ

ಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ Kagawad, August 19: Applications have been invited from young men and women interested in establishi

ಕಾಗವಾಡ, ಆ. 19: ಕಾಗವಾಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸಿ, ನೋಂದಣಿ ಮಾಡಿಸಲು ಆಸಕ್ತಿಯುಳ್ಳ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಸನ್ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.

ಮಂಗಳವಾರ (ಆ. 18) ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಸರಾಸರಿ 4,000 ಜನಸಂಖ್ಯೆಗೆ ಒಂದು ಸಂಘದಂತೆ ಕಾಗವಾಡ ಪಟ್ಟಣದ ವ್ಯಾಪ್ತಿಯಲ್ಲಿ ಒಟ್ಟು ಮೂರು ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಸಂಘಗಳ ಕಾರ್ಯಚಟುವಟಿಕೆಗಳಿಗಾಗಿ ಶಾಲಾ-ಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.

ನೋಂದಣಿಯಾಗುವ ಪ್ರತಿ ಯುವ ಸಂಘದ ಕಾರ್ಯಚಟುವಟಿಕೆಗಳಿಗೆ ಸರ್ಕಾರದಿಂದ ₹10 ಲಕ್ಷ ಅನುದಾನ ನೀಡಲಾಗುವುದು. 16ರಿಂದ 35 ವರ್ಷದೊಳಗಿನ ಅದೇ ವಾರ್ಡ್‌ನ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿರುತ್ತಾರೆ.

ಬಿಜಿವೈಎಸ್ ಪೋರ್ಟಲ್ ಅಥವಾ ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ₹10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ.

ಪಟ್ಟಣ ವ್ಯಾಪ್ತಿಯ ಅರ್ಹ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮುಖ್ಯಾಧಿಕಾರಿ ಪ್ರಸನ್ ಕಲ್ಯಾಣಶೆಟ್ಟಿ ಮನವಿ ಮಾಡಿದ್ದಾರೆ.