ಡಿ.18,19 ರಂದು ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಚರಣೆ

ಡಿ.18,19 ರಂದು ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಚರಣೆ Kala Pratibhottasa program to be celebrated on December 18th and 19th

ಡಿ.18,19 ರಂದು ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಚರಣೆ 

ವಿಜಯಪುರ 11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಮಕ್ಕಳ ಮತ್ತು ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವತ್ತ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 18 ಹಾಗೂ 19 ರಂದು ನಗರದ ಕಂದಗಲ್ಲ ಶ್ರೀ ಹನಮಂತ್ರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. 

ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಯುವ ಪ್ರತಿಭೆಗಳಿಗೆ ಆಸಕ್ತರು ಅರ್ಜಿಗಳನ್ನು  ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 16 ಸಂಜೆ 5-30 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದ ಸ್ಟೇಷನ್ ರಸ್ತೆಯ ಕಚೇರಿಯಲ್ಲಿ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ 

ವಿಜಯಪುರ 11: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೇವಾದೇವಿಗಾರರು, ಗಿರವಿ ಕಾಯ್ದೆ 1961, ನಿಯಮ 1965ರಡಿ ನೋಂದಣಿಯಾದ ಲೇವಾದೇವಿ, ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಪರವಾನಿಗೆಯನ್ನು ನಿಗದಿತ ಶುಲ್ಕ ಪಾವತಿಸಿ ಡಿ.31ರೊಳಗಾಗಿ ನವೀಕರಗೊಳಿಸಿಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.  

ನವೀಕರಣ ಮಾಡಿಕೊಳ್ಳದ ಸಂಸ್ಥೆಗಳು ನಿರ್ದಿಷ್ಟಪಡಿಸಲಾದ ದರದ ದುಪ್ಪಟ್ಟು ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಹಾಗೂ ಕಾಯ್ದೆ ಕಲಂ 7ಎ(2)ರ ಪ್ರಕಾರ ವ್ಯವಹಾರದಲ್ಲಿ ತೊಡಗಿಸಿದ ಮೊತ್ತಕ್ಕೆ ಅನುಗುಣವಾಗಿ ಭದ್ರತಾ ಠೇವಣಿಯನ್ನು ಪಾವತಿಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ವಿಜಯಪುರ-ಇಂಡಿ ಮೂಲಕ ನವೀಕರಣಕ್ಕೆ ಅರ್ಜಿ ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ 

                                 -ಜಿಲ್ಲಾಧಿಕಾರಿ ಡಾ.ಆನಂದ.ಕೆವಿಜಯಪುರ 11: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುತ್ತಿದೆ. ಸಾರ್ವಜನಿಕರು ಧ್ವಜ ಖರೀದಿಸುವ ಮೂಲಕ ದೇಶದ ಸೈನಿಕರಿಗೆ ಬೆಂಬಲಿಸಬೇಕು ಎಂದು ಅವರು ಹೇಳಿದರು.ಜಿಲ್ಲೆಯು 2025ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾದ ಗುರಿ ಸಾಧಿಸಿರುವುದರಿಂದ ಈ ನಿಧಿಯು ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಅಮೂಲ್ಯ ನೆರವು ನೀಡಲಿದ್ದು, ಜಿಲ್ಲೆಯ ಈ ಕೊಡುಗೆಯನ್ನು ಪ್ರಶಂಸಿಸುವ ಉದ್ದೇಶದಿಂದ ಜಿಲ್ಲೆಗೆ ಪ್ರಶಸ್ತಿ ಸಂದಿರುವುದು ಹೆಮ್ಮೆ ಮೂಡಿಸುತ್ತಿದೆ ಎಂದರು. 

ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆ ಉಪ ನಿರ್ದೇಶಕ ವಿನಕುಮಾರ ಪಾಟೀಲ ಸೇರಿದಂತೆ, ಮಾಜಿ ಸೈನಿಕರು, ಇಲಾಖಾ ಅಧಿಕಾರಿ,ಸಿಬ್ಬಂದಿ ಇದ್ದರು. 

(ಫೋಟೊ ಎ-1,) 

ಡಿ.23ರಂದು ಶಿಶಿಕ್ಷು ಮೇಳ : ನೋಂದಾಯಿಸಲು ಆಹ್ವಾನ ವಿಜಯಪುರ 11 : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ ತರಬೇತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಅನುಷ್ಠಾನಗೊಳಿಸಲು ಡಿ.23 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ಆಶ್ರಮ ರಸ್ತೆಯಲ್ಲಿರುವ ಬಿ.ಎಲ್ ಡಿ ಇ ಐಟಿಐ ಕಾಲೇಜಿನ ಆವರಣದಲ್ಲಿ ಶಿಶಿಕ್ಷು ಮೇಳ ಆಯೋಜಿಸಲಾಗಿದೆ.  

       ಐಟಿಐ ಪಾಸಾದ ಅಭ್ಯರ್ಥಿಗಳು ನ್ಯಾಪ್ ಲಿಂಕ್ ಣಣಠಿ://ತಿತಿತಿ.ಚಿಠಿಠಿಡಿಜಟಿಣಛಿಠಿಟಿಜಚಿ.ರಠ.ಟಿ/ಛಿಚಿಟಿಜಜಚಿಣಜ-ಡಿಜರಣಡಿಚಿಣಠ ಮೂಲಕ ನೊಂದಾಯಿಸಿಕೊಂಡು ಮೇಳದಲ್ಲಿ ಭಾಗವಹಿಸಬಹುದಾಗಿದೆ ಹಾಗೂ ಉದ್ದಿಮೆದಾರರು ಗೂಗಲ್ ಲಿಂಕ್ ತಿತಿತಿ.ಚಿಠಿಠಿಡಿಜಟಿಣಛಿಠಿಟಿಜಚಿ.ರಠ.ಟಿ/ಣಚಿಛಟಟಜಟಿಣ-ಡಿಜರಣಡಿಚಿಣಠನಲ್ಲಿ ನೊಂದಾಯಿಸಿಕೊಂಡು ಈ ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.  

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 9620848158/9986123893/9886437517 ಸಂಖ್ಯೆಗೆ ಅಥವಾ ಹತ್ತಿರದ ಸರ್ಕಾರಿ-ಅನುದಾನಿತ ಖಾಸಗಿ ಐಟಿಐ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಾಲತವಾಡದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.