ಕಲ್ಪವೃಕ್ಷ ಶಾಲೆಯ ವಿದ್ಯಾರ್ಥಿಗಳಿಂದ ವೃದ್ಧಾಶ್ರಮ ಭೇಟಿ
Kalpavruksha School students visit old age home
ಲೋಕದರ್ಶನ ವರದಿ
ಕಲ್ಪವೃಕ್ಷ ಶಾಲೆಯ ವಿದ್ಯಾರ್ಥಿಗಳಿಂದ ವೃದ್ಧಾಶ್ರಮ ಭೇಟಿ
ಹುಕ್ಕೇರಿ 03: ಕಲ್ಪವೃಕ್ಷ ಶಾಲೆ, ಬೈಲಹೊಂಗಲ ವಿದ್ಯಾರ್ಥಿಗಳು ಇತ್ತೀಚೆಗೆ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಉತ್ತಮ ಸಂದೇಶವನ್ನು ನೀಡಿದರು
ವಿದ್ಯಾರ್ಥಿಗಳು ವೃದ್ಧಾಶ್ರಮದ ಹಿರಿಯರೊಂದಿಗೆ ಸಮಯ ಕಳೆಯುತ್ತಾ, ಅವರ ಜೀವನಾನುಭವಗಳನ್ನು ಆಲಿಸಿದರು. ಹಿರಿಯರೊಂದಿಗೆ ಮಾತುಕತೆ ನಡೆಸಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಹಾಡುಗಳು ಹಾಗೂ ಪ್ರಾರ್ಥನೆಗಳನ್ನು ನಡೆಸುವ ಮೂಲಕ ಸಂತೋಷ ಹಂಚಿಕೊಂಡರು. ಈ ವೇಳೆ ವಿದ್ಯಾರ್ಥಿಗಳು ತಾವು ಸಂಗ್ರಹಿಸಿದ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳನ್ನು ವೃದ್ಧಾಶ್ರಮಕ್ಕೆ ಹಸ್ತಾಂತರಿಸಿದರು.
ಆಡಳಿತಾಧಿಕಾರಿ ಉಮೇಶ ಗಡತನ್ನವರ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಹಾನುಭೂತಿ ಮತ್ತು ಹಿರಿಯರ ಮೇಲಿನ ಗೌರವ ಬೆಳೆಸುವ ಉದ್ದೇಶದಿಂದ ಈ ಭೇಟಿ ಆಯೋಜಿಸಲಾಗಿದೆ” ಎಂದು ತಿಳಿಸಿದರು.
ವೃದ್ಧಾಶ್ರಮದ ನಿರ್ವಾಹಕರು ಹಾಗೂ ನಿವಾಸಿಗಳು ವಿದ್ಯಾರ್ಥಿಗಳ ಈ ಆತ್ಮೀಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮವು ಶಿಕ್ಷಕರಾದ ಶ್ರೀಮತಿ ಸರಸ್ವತಿ ಬನ್ನಿಗಿಡದ, ಶ್ರೀಮತಿ ಮಹಾಲಕ್ಷ್ಮಿ ಹಿರೇಮಠ, ಶ್ರೀ ಮಹಾಂತೇಶ ಕುಂಬಾರ ಮತ್ತು ಶ್ರೀ ಆನಂದ ತಳವಾರ ಮಾರ್ಗದರ್ಶನದಲ್ಲಿ ನಡೆಯಿತು.
ಈ ಭೇಟಿ ವಿದ್ಯಾರ್ಥಿಗಳಿಗೆ ಸಮಾಜದ ವಾಸ್ತವಿಕತೆ ಅರಿಯಲು ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆಯಾಯಿತು. ಪ್ರಾರಂಭದಲ್ಲಿ ಶಕ್ತಿ ಸದನ ಕೇಂದ್ರದ ಸುಗಂಧ ಅಲ್ಲಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು ಶ್ರೀಮತಿ ದ್ರಾಕ್ಷಾಯಿಣಿ ಮಠಪತಿ ವಂದಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 