ಕೀರ್ತನೆಗಳ ಮೂಲಕ ಸಮಾಜ ಸುಧಾರಣೆಗೆ ಹೋರಾಡಿದವರು ಕನಕದಾಸರು: ಡಾ. ಅಜಿತ ಪ್ರಸಾದ

ಕೀರ್ತನೆಗಳ ಮೂಲಕ ಸಮಾಜ ಸುಧಾರಣೆಗೆ ಹೋರಾಡಿದವರು ಕನಕದಾಸರು: ಡಾ. ಅಜಿತ ಪ್ರಸಾದ Kanakadasa fought for social reform through hymns: Dr. Ajita Prasad

ಧಾರವಾಡ 08: ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಮೆರುಗನ್ನು ತಂದವರು ಕನಕದಾಸರು, ಅಪಾರವಾದ ಪಾಂಡಿತ್ಯವನ್ನು ಹೊಂದಿದ್ದ ಕನಕದಾಸರು ಕೀರ್ತನರಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಭಕ್ತಿ, ವೈರಾಗ್ಯ, ಭಜನೆಗಳಷ್ಟೇ ಅಲ್ಲದೇ ಅಂದಿನ ಶತಮಾನದಲ್ಲಿ ಜಾತಿ ತಾರತಮ್ಯದ ವಿರುದ್ಧ ಆಧ್ಯಾತ್ಮಿಕವಾಗಿ ಹೋರಾಡಿದವರು ಎಂದು ಜೆ.ಎಸ್‌.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಜೆ.ಎಸ್‌.ಎಸ್ ಐ.ಟಿ.ಯ ಕಾಲೇಜು, ಜೆ.ಎಸ್‌.ಎಸ್ ಎಂ.ಸಿ.ಎ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ ಕನಕದಾಸರ ಜಯಂತಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಜೆ.ಎಸ್‌.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಮಾತನಾಡಿದರು. 

ಕನಕದಾಸರು ಜಾತಿ ಮತ, ಕುಲಗಳ ತಾರತಮ್ಯಗಳನ್ನು ಬಲವಾಗಿ ವಿರೋಧಿಸಿ ಕೀರ್ತನೆಗಳ ಮೂಲಕ ಸಮಾಜದ ಪಿಡುಗುಗಳನ್ನು ಸರಳ ಭಾಷೆಯಲ್ಲಿ ತಿಳಿಸಿ, ಸಮಾಜಿಕ ಕ್ರಾಂತಿಗೆ ಮುಂದಾದರು. ಕನಕದಾಸರು 15-16 ನೇ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಮೊದಲು ದಂಡನಾಯಕರಾಗಿ ಸೇವೆ ಸಲ್ಲಿಸಿ ಯುಧ್ಧದಲ್ಲಿ ಸೋತಾಗ ವೈರಾಗ್ಯದಿಂದಾಗಿ ದಾಸಪಂಕ್ತಿಯಲ್ಲಿ ಸೇರಿಕೊಂಡರು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗ್ರಾಮದಲ್ಲಿ ಬಚ್ಚಮ್ಮ ಮತ್ತು ಬೀರ​‍್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದರು. ಮಧ್ವ ತತ್ವಶಾಸ್ತ್ರವನ್ನು ಕಲಿತರು. ಉಡುಪಿ ಕೃಷ್ಣನ ಅನನ್ಯ ಭಕ್ತರಾಗಿದ್ದರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದವರು. ಕಾಗಿನೆಲೆಯ ಆದಿಕೇಶವರಾಯ ಎಂಬುದು ಇವರ ಕೀರ್ತನೆಗಳ ಅಂಕಿತನಾಮವಾಗಿದೆ. ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳಣ್ನು ಕನಕದಾಸರ ವಿವಿಧ ಸಾಹಿತ್ಯದ ಪ್ರಕಾರಗಳು ಇವಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಅರ​‍್ಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗಡೆಯನ್ನು ಮಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ನಾವು ಕಾಣಬಹುದು. ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಿಸಾರ, ನೃಸಿಂಹಸ್ತವ ಇವರ ಪ್ರಸಿದ್ಧ ಕೃತಿಗಳಾಗಿವೆ. ಕುಲ, ಕುಲವೆಂದು ಹೋಡೆದಾಡದಿರಿ ಎಂಬ ತತ್ವಪದ ಇಂದಿಗೂ ಪ್ರಸ್ತುತ ಎಂದರೇ ತಪ್ಪಾಗಲಾರದು. ಹಾಗೇಯೆ ಸಾಮಾಜಿಕ ಮಡಿವಂತಿಕೆಯನ್ನು ಕುರಿತು ತಮ್ಮ ಕೀರ್ತನೆಗಳಲ್ಲಿ ವಿಡಂಬಿಸಿದ್ದು, ಸಮಾಜದ ಸ್ಥಿತಿಗತಿಗಳನ್ನು ತಿದ್ದುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು 

ಇದೆ ಸಂದರ್ಭದಲ್ಲಿ  ಮಹಾವೀರ ಉಪಾದ್ಯೆ, ಡಾ. ಸೂರಜ್ ಜೈನ್, ಆರ್‌.ವಿ ಚಿಟಗುಪ್ಪಿ, ವಿಭಾ ಮೋಗಳಿ, ಮಂಜುನಾಥ ಪೂಜಾರ, ಭಲಬೀಮ ಹಾವನೂರ, ರೋನಿಲ್ ಮನೋಹರ ಇತರರು ಇದ್ದರು.