ಕನಕದಾಸರು ದೇಶ ಕಂಡ ದಾಸ ಶ್ರೇಷ್ಠರು: ಚಂದ್ರಶೇಖರ್ ನಾಯ್ಕ
Kanakadasa was the greatest servant of the country: Chandrasekhar Nayka
ಬ್ಯಾಡಗಿ 08: ಕನಕದಾಸರು ದೇಶ ಕಂಡ ದಾಸ ಶ್ರೇಷ್ಠರು, ಅವರು ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತ, ಪಂಥಗಳನ್ನು ಹೋಗಲಾಡಿಸಿದ್ದರು. 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪವನ್ನು ಸ್ಥಾಪಿಸಿ ಸಮ ಸಮಾಜ ಕಟ್ಟುವ ಕೆಲಸ ಮಾಡಿದವರು ಎಲ್ಲಾ ಸಮಾಜದ ಏಳಿಗೆಗಾಗಿ ಶ್ರಮಿಸಿದರು ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಭಕ್ತ ಶ್ರೇಷ್ಠರು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಗಾಗಿ ಕೀರ್ತನೆಗಳ ಮೂಲಕ ಜಾತಿ ಮುಖ್ಯ ಅಲ್ಲ ನೀತಿ ಮುಖ್ಯ. ತಮ್ಮ ಭಕ್ತಿಯಿಂದ ಶ್ರೀಕೃಷ್ಣನನ್ನೆ ತನ್ನೆಡೆಗೆ ಒಲಿಸಿಕೊಂಡಿರುವುದನ್ನು ನಾವು ಕಾಣುತ್ತೆವೆ. ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರು ಜನಸಾಮಾನ್ಯರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ದಾಸ ಸಾಹಿತ್ಯ, ಭಕ್ತಿ ಪಂಥದ ಮೂಲಕ ಮನುಕುಲಕ್ಕೆ ಅತ್ಯುತ್ತಮ ಸಂದೇಶವನ್ನು ನೀಡಿದ್ದಾರೆ.ಕನಕದಾಸರು ಒಬ್ಬ ದಂಡನಾಯಕನಾಗಿದ್ದು, ತನ್ನ ಸಿರಿ, ಸಂಪತ್ತು ಎಲ್ಲವನ್ನು ತ್ಯಾಗಮಾಡಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ್ದಾರೆ. ಮಾನವನ ಒಳಿತಿಗಾಗಿ ಅವರ ಕೊಡುಗೆಯನ್ನು ನಾವು ಸ್ಮರಿಸಲೇಬೇಕು. ಕನಕದಾಸರು ಮೋಹಿನಿ ತರಂಗಿಣಿ. ಹರಿಭಕ್ತಸಾರ ಮತ್ತು ಹಲವಾರು ಪ್ರಮುಖ ಕೃತಿಗಳನ್ನು ರಚಿಸಿ ದಾಸ ಸಾಹಿತ್ಯದ ಅಪಾರ ಕೊಡುಗೆ ನೀಡುವುದರ ಜೊತೆಗೆ ಸಮಸ್ತ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಯಾವುದೇ ಮಹನೀಯರ ಜಯಂತಿ ಆಚರಣೆ ಒಂದು ಜಾತಿಗೆ ಸೀಮಿತವಾಗಬಾರದು ಎಲ್ಲ ಧರ್ಮ ಸಮಾಜದವರು ಪಾಲ್ಗೊಂಡಾಗ ಮಾತ್ರ ನಿಜವಾದ ಅರ್ಥ ಬರಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕವಾಗಿ ಪಿಎಫ್ ಜಗಪುರ್ ಅವರು ಮಾತನಾಡಿದರು. ಭಕ್ತ ಕನಕದಾಸರ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಜಿ ಕೋಟಿ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದಲ್ಲಿ ರಾಜ್ಯ ಯಶಸ್ವಿನಿ ಆರೋಗ್ಯ ಸಮಿತಿ ಸದಸ್ಯ ಮಲ್ಲಿಕಾರ್ಜುನ ಕರಿಲಿಂಗಣ್ಣನವರ್. ಬೀರ್ಪ ಬಣಕಾರ್. ಸಮಾಜದ ಅಧ್ಯಕ್ಷ ಚಿಕ್ಕಣ್ಣ ಹಾದಿಮನಿ ಸೋಮಣ್ಣ ಬರಡಿ. ಅಡಿವೆಪ್ಪ ಗುರಮ್ಮನವರ. ಸಮಾಜದ ಜಿಲ್ಲಾಧ್ಯಕ್ಷ ನಾಗರಾಜ ಆನ್ವೇರಿ .ಗುಡ್ಡಪ್ಪ ಆಡಿನವರ್. ಮಂಜಣ್ಣ ಹೆಬಸೂರ್. ವಿಜಯ್ ಹುಡೆದ. ಶಂಕ್ರಣ್ಣ ಮಾತನವರ. ನಿಂಗಪ್ಪ ಆಡಿನವರ್. ಯಮನುರ್ಪ ಉಜನಿ. ಹಾಗೂ ಸಮಾಜದ ಅನೇಕ ಮುಖಂಡರು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 