ಮುಂಬೈ 16: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರ ನಾಳೆ (ಜ.17) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಇಂದು ಮುಂಬೈನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಚಿತ್ರವನ್ನು ವೀಕ್ಷಿಸಿದ್ದಾರೆ.
ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಜೀವನಾಧಾರಿತ ಈ ಸಿನಿಮಾಗೆ ಕಥೆ ಬರೆದು ನಿರ್ದೇಶನದ ಹೊಣೆ ನಿಭಾಯಿಸಿರುವ ಕಂಗನಾ, ಮುಖ್ಯಪಾತ್ರದಲ್ಲಿಯೂ ಕಾಣಿಸಿಕೊಂಡಿಸಿಕೊಂಡಿದ್ದಾರೆ. ಸಹ ನಿರ್ಮಾಪಕಿಯಾಗಿ ಬಂಡವಾಳವನ್ನೂ ಹೂಡಿದ್ದಾರೆ.