ನ. 9ಕ್ಕೆ ಕಾನಿಪ ಸಂಘದ ಚುನಾವಣೆ
Kanip Sangha elections on Nov. 9
ಲೋಕದರ್ಶನ ವರದಿ
ನ. 9ಕ್ಕೆ ಕಾನಿಪ ಸಂಘದ ಚುನಾವಣೆ
ವಿಜಯಪುರ 10: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ "ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( ಏಚಿಡಿಟಿಚಿಣಚಿಞಚಿ ಣಟಿಠ ಠ ತಿಠಞಟಿರ ರಿಠಡಿಟಿಚಿಟ)" ದ 2025-28 ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸುಮಾರು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ.ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರೀಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.
ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಕಾರ್ಯಾಲಯದಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 