ಕನ್ನಡ ಭಾವಗೀತೆಗಳು ಪ್ರೇಮ ಅರಳಿಸುವ ಸಾಧನ
Kannada *Bhavageethe* (lyrical poems) are a medium that blossoms love.
ಕನ್ನಡ ಭಾವಗೀತೆಗಳು ಪ್ರೇಮ ಅರಳಿಸುವ ಸಾಧನ
ಬಳ್ಳಾರಿ 11: ಕವಿಗಳು ರಚಿಸಿದ ಕವನಗಳಿಗೆ ಗಾಯಕರು ಧ್ವನಿಯಾಗುವ ಮೂಲಕ ಅವುಗಳನ್ನು ಜನಮಾನಸಕ್ಕೆ ಯಶಸ್ವಿಯಾಗಿ ತಲುಪಿಸಬಹುದು ಎಂದು ಆರ್.ಎಚ್.ಎಂ. ಚೆನ್ನಬಸಯ್ಯಸ್ವಾಮಿ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರುಕ್ಮಿಣಮ್ಮ ಚೆಂಗಾರೆಡ್ಡಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರೀ ಚೇಳ್ಳಗುರ್ಕಿ ಎರ್ರಿಸ್ವಾಮಿ ದತ್ತಿ ಹಾಗೂ ದಿ. ಯರ್ರಗುಡಿ ನಾರಾಯಣರಾವ್ ಮತ್ತು ದಿ. ಸುಮಿತ್ರಮ್ಮ ದತ್ತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಜಾಗೃತಿ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕನ್ನಡ ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಜನಮಾನಸಕ್ಕೆ ತಲುಪಿಸುವ ಕಾರ್ಯ ನಡೆಯುತ್ತಿದೆ ಎಂದು ಮೋಕ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಸ್.ಎಂ. ಹಿರೇಮಠ ಹೇಳಿದರು. ಕನ್ನಡ ಗೀತೆಗಳು ಬದುಕಿನ ವಿವಿಧ ಮಜಲುಗಳನ್ನು ಹೃದಯಕ್ಕೆ ತಲುಪಿಸುವ ಮಹತ್ವದ ಕಾರ್ಯ ಮಾಡುತ್ತವೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿ ಸಮಾಜ ಸೇವಕ ಎಂ. ಸೋಮಶೇಖರ್ ಮಾತನಾಡಿ, ದತ್ತಿ ಕಾರ್ಯಕ್ರಮಗಳ ಮೂಲಕ ಕನ್ನಡ ಸಂಸ್ಕೃತಿಯ ಜಾಗೃತಿಯನ್ನು ಜನರಲ್ಲಿ ಸದಾಕಾಲ ಮೂಡಿಸುತ್ತಿರುವುದು ಉತ್ತಮ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರಿ ಪ್ರಾಂಶುಪಾಲೆ ಶ್ರೀಮತಿ ಸತ್ಯವತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಸಂಸ್ಕಾರ ಬೆಳೆಸುವಲ್ಲಿ ಕನ್ನಡ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿವೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗಾಯತ್ರಿ ಭಾವಿಕಟ್ಟಿ ಮಾತನಾಡಿ, ಹಾಡುಗಳು ಸುಲಭವಾಗಿ ಜನಮನ ತಲುಪುವ ಮೂಲಕ ಕನ್ನಡ ಜಾಗೃತಿಗೆ ಸಹಕಾರಿಯಾಗಿವೆ ಎಂದರು.
ಕಾಲೇಜಿನ ಉಪನ್ಯಾಸಕ ಕೆ. ಮಲ್ಲಿಕಾರ್ಜುನ ಕಾರ್ಯಕ್ರಮ ನಿರೂಪಿಸಿದರು. ಕಸಾಪ ಜಿಲ್ಲಾ ಸಂಚಾಲಕ ಕಪ್ಪಗಲ್ಲು ಬಿ. ಚಂದ್ರಶೇಖರಚಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕ ಗಿರಿರಾಜಪ್ಪ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 