ಕನ್ನಡ ಭವನ ಅಕ್ರಮ ಖಾಸಗಿಗೆ : ಜಿಲ್ಲಾ ಕಸಾಪ ಅಧ್ಯಕ್ಷರ ಸ್ಥಾನಕ್ಕೆ ಕುತ್ತು
Kannada Bhavan illegally privatized: District Kasapa is a candidate for the post of president
ಲೋಕದರ್ಶನ ವರದಿ
ಬೆಳಗಾವಿ 26: ಬೆಳಗಾವಿಯಲ್ಲಿ ನಿರ್ಮಿಸಲಾದ ಸರ್ಕಾರದ ಕನ್ನಡ ಭವನವನ್ನು ಅಕ್ರಮವಾಗಿ ಖಾಸಗಿ ಸಂಘದವರಿಗೆ ನಿರ್ವಹಣೆ ಮಾಡಲು ನೀಡಿರುವ ಹಾಗೂ ಅಧ್ಯಕ್ಷ ಸ್ಥಾನ ದುರೊಯೋಗ ಪಡಿಸಿಕೊಂಡಿರುವ ಬೆಳಗಾವಿ ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟೀಸ್ ಜಾರಿಯಾಗಿದ್ದು ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಈಗ ಕುತ್ತು ಬಂದಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ.ದಯಾನಂದ ಅವರು ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿಗೆ 11 ಕನ್ನಡ ಪರ ಸಂಘಟನೆಗಳಿಂದ ದೂರು ಸಲ್ಲಿಸಲಾಗಿದೆ. ದೂರು ಗಂಭೀರವಾಗಿ ಪರಿಗಣಿಸಿ ಈ ನೋಟೀಸ್ ಜಾರಿ ಮಾಡಲಾಗಿದೆ.
ಸರ್ಕಾರದಿಂದ ಬೆಳಗಾವಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗಿದೆ. ಆದರೆ ಇದನ್ನು ಅಕ್ರಮವಾಗಿ ಖಾಸಗಿಯವರ ಕನ್ನಡ ಸಾಂಸ್ಕೃತಿಕ ಭವನ ಕ್ಷೇಮಾಭಿವೃದ್ಧಿ ಸಂಘಕ್ಕೆ ಹಸ್ತಾಂತರ ಮಾಡಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಷರತ್ತು, ನಿಬಂಧನೆ ಉಲ್ಲಂಘಿಸಿ ನೀಡಲಾಗಿದೆ.
ಇದರಿಂದ ಕಸಾಪಗೆ ಮಾಸಿಕವಾಗಿ 2 ಲಕ್ಷ ರುಪಾಯಿ ಬಾಡಿಗೆ ನಷ್ಟವಾಗುತ್ತಿದೆ. ಯಾಕೇ ನಿಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಬಾರದು. ಮುಂಬರುವ ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ಕೊಡದಿದ್ದರೆ ಮುಂದಿನ ಕ್ರಮ ಜರುಗಿಸುವುದಾಗಿ ಮಂಗಳಾ ಮೆಡಗುಡ್ ಅವರಿಗೆ ನೀಡಲಾದ ನೋಟೀಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಕನ್ನಡ ಭವನ ಖಾಸಗಿಗೆ : ಗಂಭೀರವಾಗಿ ಪರಿಗಣಿಸಲಾಗಿದೆ : ಚಂದರಗಿ
ಜಿಲ್ಲೆ ಹಾಗೂ ತಾಲೂಕಿನ ಎಲ್ಲ ಕನ್ನಡ ಸಾಹಿತ್ಯ ಪರಿಷತ್ತಿನ ಭವನಗಳು ಪರಿಷತ್ತಿನ ಆಸ್ತಿ ಈ ಹಿನ್ನೆಲೆಯಲ್ಲಿ ಬೆಳಗಾವಿ ಕನ್ನಡ ಭವನದ ವಿವಾದ ಈಗ ರಾಜ್ಯಮಟ್ಟ ವಿಷಯಕ್ಕೆ ಸಂಭಂದಿಸಿದಾಗಿದೆ. ಸುಮಾರು ಕನ್ನಡ ಸಂಘಟನೆಗಳು ಈ ಕುರಿತು ರಾಜ್ಯ ಪರಿಷತ್ತಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧ್ಯಕ್ಷರಿಗೆ ನೋಟೀಸ್ ನೀಡಲಾಗಿದೆ ಎಂದು ಜಿಲ್ಲಾ ಕನ್ನಡ ಸಂಘನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 