ಹೋರ್ತಿ ಮಲ್ಲಿಕಾರ್ಜುನ ಶಾಲೆಯಲ್ಲಿ ಕನ್ನಡ ಕಲರವ
Kannada Kalarava at Horthi Mallikarjuna School
ಹೋರ್ತಿ ಮಲ್ಲಿಕಾರ್ಜುನ ಶಾಲೆಯಲ್ಲಿ ಕನ್ನಡ ಕಲರವ
ಇಂಡಿ 02 : ತಾಲ್ಲೂಕಿನ ಹೋರ್ತಿ ಮಲ್ಲಿಕಾರ್ಜುನ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವನ್ನು ಹಬ್ಬವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ಬಿ ಬಿ ಗಡ್ಡದ ಅವರು ಮಾತನಾಡಿ ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವು ಕರ್ನಾಟಕದ ಸಂಸ್ಥಾಪನಾ ದಿನವಾಗಿದೆ. 1956 ರ ನವೆಂಬರ್ 1 ರಂದು ಮೈಸೂರು ರಾಜ್ಯವನ್ನು (ಈಗಿನ ಕರ್ನಾಟಕ) ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ಒಗ್ಗೂಡಿಸಿ ರಚಿಸಲಾಯಿತು. ಈ ಹಬ್ಬದ ಮುಖ್ಯ ಉದ್ದೇಶಗಳು ಕರ್ನಾಟಕದ ಏಕೀಕರಣವನ್ನು ಸ್ಮರಿಸುವುದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುವುದು, ಮತ್ತು ನಾಡಿನ ಸಾಧಕರನ್ನು ಗೌರವಿಸುವುದಾಗಿದೆ. ರಾಜ್ಯದ ಎಲ್ಲೆಡೆ ಮಾತ್ರವಲ್ಲದೇ ವಿದೇಶಗಳಲ್ಲು ಸಹ ಕನ್ನಡಿಗರು ಕನ್ನಡ ಭಾಷೆಯ ಹಬ್ಬ ಆಚರಿಸುವುದು, ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕುಹಾಕುವುದು ಸಾಮಾನ್ಯ. ಇದೊಂದು ಸಡಗರದ ಹಬ್ಬ ಸಹ ಎಲ್ಲಿರಿಗೂ. ಇನ್ನು ಶಾಲಾ, ಕಾಲೇಜುಗಳಲ್ಲಿ ಈ ಹಬ್ಬವನ್ನು ಹಲವು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವೇ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವದ ಬಗ್ಗೆ ಪ್ರಬಂಧ ಬರಹದ ಸ್ಪರ್ಧೆ, ಭಾಷಣ ಸ್ಪರ್ಧೆ ನಡೆಸುವ ಮೂಲಕವು ಈ ಉತ್ಸವ ಆಚರಿಸಲಾಗುತ್ತದೆ.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಅಣ್ಣಪ್ಪ ಶಿರೂರ ಎಮ್ ಆರ್ ತೇಲಿ, ಜಿ ಕೆ ಕೊಳಿ ವೀರೇಶ್ ಹೀರೆಮಠ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 