ಕನ್ನಡ ಮನಸುಗಳು ಕರ್ನಾಟಕ ತಂಡದ ಸರಕಾರಿ ಶಾಲೆ ಉಳಿಸಿ ಅಭಿಯಾನ
Kannada Minds Karnataka Team's Save Government Schools Campaign
ಹಿರೇಬೂದನೂರ 06: ಇದೇ ಫೆಬ್ರವರಿ 7 ಹಾಗೂ 8 ರಂದು ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಕನ್ನಡ ಮನಸುಗಳು ಕರ್ನಾಟಕ ತಂಡ ಸರಕಾರಿ ಶಾಲೆ ಉಳಿಸಿ ಅಭಿಯಾನದಡಿ ಬಣ್ಣದ ಮೆರಗು ನೀಡಲು ಆಗಮಿಸಲಿದೆ.
2017ರಲ್ಲಿ ಪವನ ಧರೆಗುಂಡಿ ನೇತೃತ್ವದಲ್ಲಿ ಸ್ಥಾಪನೆಯಾದ ಈ ತಂಡ ಇಲ್ಲಿಯವರೆಗೆ ರಾಜ್ಯದ ವಿವಿಧ ಜಿಲ್ಲೆಗಳ 65 ಸರಕಾರಿ ಶಾಲೆಗಳಿಗೆ ಬಣ್ಣದ ಮೆರಗು ನೀಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಖಾನಾಪೂರ ತಾಲೂಕಿನ ತೋಲಗಿ, ಬೆಳಗಾವಿ ತಾಲೂಕಿನ ಕುಕಡೊಳ್ಳಿ ಹಾಗೂ ಸವದತ್ತಿ ತಾಲೂಕಿನ ಹಾರೂಗೊಪ್ಪ ಹಾಗೂ ಹಿರೇಬೂದನೂರ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಹಿಂದಿನ ಅಭಿಯಾನಗಳಲ್ಲಿ ಬಣ್ಣದ ಮೆರಗು ನೀಡಿದೆ.
ದಾನಿಗಳ ಸಹಕಾರದಿಂದ ದೇಣಿಗೆಯನ್ನು ಸಂಗ್ರಹಿಸಿ ಆದ್ಯತಾವಾರು ಅವಶ್ಯಕತೆಯನ್ನು ಆಧರಿಸಿ ಈ ತಂಡವು ಈ ಅಭಿಯಾನವನ್ನು ಮಾಡುತ್ತಿದೆ. ಸರಕಾರಿ ಶಾಲೆಗಳನ್ನು ಚಂದಗಾಣಿಸುವ ಈ ತಂಡದ ಪ್ರಯತ್ನ ಶ್ಲಾಘನೀಯ ಎಂದು ಹಿರೇಬೂದನೂರ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್ ಆರ್ ರೇವಣ್ಣವರ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 