ಬೆಂಗಳೂರು, ನ.27- ಆಮ್ ಆದ್ಮಿ ಪಕ್ಷ (ಎಎಪಿ) ದ ವತಿಯಿಂದ ನ 30 ರಂದು ಸಂಜೆ 4 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಜಯನಗರ ಎಎಪಿ ಅಧ್ಯಕ್ಷ ಚನ್ನಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಅಸ್ಮಿತೆಯ ಹೋರಾಟದ ಸ್ಫೂರ್ತಿಯೊಂದಿಗೆ ಆಮ್ ಆದ್ಮಿ ಪಕ್ಷ ಬೆಂಗಳೂರಿನ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿ ನಗರಕ್ಕೆ ಹೊಸ ರೂಪ ನೀಡಿ, ಕನ್ನಡವನ್ನು ಬಿಬಿಎಂಪಿ ಆಡಳಿತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೆಹಲಿಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯ ಒದಗಿಸಿಕೊಟ್ಟಿದ್ದಾರೆ ಎಂದು ಪಕ್ಷದ ಕನ್ನಡ ಒಲವನ್ನು ತೆರೆದಿಟ್ಟರು.
ಹಂಪಿನಗರದ ಬಿಬಿಎಂಪಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಗಾಯಕ ರಾಮಚಂದ್ರ ಹಡಪದ್ ಹಾಗೂ ನಾತಿಚರಾಮಿ ಖ್ಯಾತಿಯ ಶರಣ್ಯ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.