ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
ಬಾಗಲಕೋಟೆ: ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಈ ವರ್ಷವೂ ನವೆಂಬರ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತಂತೆ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ಜರುಗಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಮಾತನಾಡಿದ ಜಿಲ್ಲಾಧಿಕಾರಿಗಳು ಅಂದು ಬೆಳಿಗ್ಗೆ 7.30ಕ್ಕೆ ಜಿಲ್ಲಾಡಳಿತ ಭವನದ ಮುಂದೆ ಇರುವ ಅಶೋಕ ಸ್ತಂಬದ ವೃತ್ತದಿಂದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆ ಹಮ್ಮಿಕೊಳ್ಳುವುದು. ನಂತರ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ನಾಡಿನ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುವಂತ ಸ್ಥಬ್ದ ಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಲ್ಲಿ ಹೆಚ್ಚಿನ ಮಹಿಳಾ ಕಲಾತಂಡಗಳಿಗೆ ಭಾಗವಹಿಸುವಂತೆ ಮಾಡಲು ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಯಿತು. ಕಾರ್ಯಕ್ರಮ ಸಿದ್ದತೆಗೆ 9 ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯ ಸದಸ್ಯರ ಕರ್ತವ್ಯಗಳ ಬಗ್ಗೆ ಸಭೆ ಕರೆದು ಕಾರ್ಯಕ್ರಮ ರೂಪು ರೇಶೆಗಳನ್ನು ತಯಾರಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರ ಗೀತೆ, ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಯನ್ನು ಹಾಡಿಸುವ ವ್ಯವಸ್ಥೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣ ಹಾಗೂ ಮೆರವಣಿಗೆ ಸ್ಥಳಗಳನ್ನು ಸ್ವಚ್ಛತೆ, ಶುದ್ದ ಕುಡಿಯುವ ನೀರು, ವೇದಿಕೆ, ವಿದ್ಯುತ್, ಧ್ವನಿವರ್ಧಗಳ ಹಾಗೂ ಜನರೇಟರ, ಆಸನಗಳ ವ್ಯವಸ್ಥೆಗಳ ಜೊತೆಗೆ ಪೋಲಿಸ್ ಬಂದೋಬಸ್ತಿ ವ್ಯವಸ್ಥೆ ಮಾಡಲು ತಿಳಿಸಿದರು. ಅಂದು ಸಂಜೆ ನವನಗರದ ಕಲಾಭವನದಲ್ಲಿ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದರು.
ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ, ಗಣ್ಯರಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡುವದರ ಜೊತೆಗೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಗೆ ಹಳೆ ಅಬಾಗಲಕೋಟೆಯಿಂದ ನವನಗರಕ್ಕೆ ಬಂದು ಹೋಗಲು ಬಸ್ಸಿನ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಲಾಯಿತು. ಅಲ್ಲದೇ ಜಿಲ್ಲಾಡಳಿತ ಭವನದ ಕಟ್ಟಡ ಸೇರಿದಂತೆ ಜಿಲ್ಲಾಡಳಿತ ಗೃಹ ಕಚೇರಿ, ಕಮೀಶನರ್ ಆರ್&ಆರ್ ಗೃಹ ಕಚೇರಿ, ತಾಲೂಕ ಭವನ ಕಟ್ಟಡಕ್ಕೂ ವಿದ್ಯುತ್ ದೀಪ ಅಲಂಕಾರ ವ್ಯವಸ್ಥೆ ಮಾಡಬೇಕೆಂದರು.
ಮೆರವಣಿಗೆ ಹಾಗೂ ಕಾರ್ಯಕ್ರಮದಲ್ಲಿ ಎಲ್ಲ ಸಕರ್ಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಯಿತು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿಯ ಉಪಕಾರ್ಯದಶರ್ಿ ಎ.ಜಿ.ತೋಟದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಶೈಲ ಕರಿಶಂಕರಿ, ಕನ್ನಡಪರ ಸಂಘಟನೆಯ ಪ್ರತಿನಿಧಿಗಳಾದ ಆರ್.ಡಿ.ಬಾಬು, ರಮೇಶ ಬದ್ನೂರ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 