ಏಕೀಕರಣಕ್ಕೆ ಶ್ರಮಿಸಿದ ಮಹನೀಯರನ್ನು ನೆನಪಿಸಿಕೊಳ್ಳುವ ಹಬ್ಬವೇ ಕನ್ನಡ ರಾಜ್ಯೋತ್ಸವ: ಡಾ.ನಾಗರಾಜ್

ಏಕೀಕರಣಕ್ಕೆ ಶ್ರಮಿಸಿದ ಮಹನೀಯರನ್ನು ನೆನಪಿಸಿಕೊಳ್ಳುವ ಹಬ್ಬವೇ ಕನ್ನಡ ರಾಜ್ಯೋತ್ಸವ: ಡಾ.ನಾಗರಾಜ್  Kannada Rajyotsava is a festival to remember the great men who worked for unification: Dr. Nagaraj

ಏಕೀಕರಣಕ್ಕೆ ಶ್ರಮಿಸಿದ ಮಹನೀಯರನ್ನು ನೆನಪಿಸಿಕೊಳ್ಳುವ ಹಬ್ಬವೇ ಕನ್ನಡ ರಾಜ್ಯೋತ್ಸವ: ಡಾ.ನಾಗರಾಜ್  

ಬಾಗಲಕೋಟೆ 02: ಕನ್ನಡ ಭಾಷೆ ಸಂಸ್ಕೃತಿ ಪರಂಪರೆ ಕನ್ನಡ ನಾಡು ನುಡಿಗೆ ಕನ್ನಡ ಏಕೀಕರಣಕ್ಕೆ ಶ್ರಮಿಸಿದ ಮಹನೀಯರನ್ನು ನೆನಪಿಸಿಕೊಳ್ಳುವ ಹಬ್ಬವೇ ಕನ್ನಡ ರಾಜ್ಯೋತ್ಸವ ಎಂದು ಸಾಹಿತಿಗಳು ಹಾಗೂ  ಬಸವೇಶ್ವರ ಕಲಾ ಮಹಾ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ ಆರ್ ನಾಗರಾಜ್ ಅವರು ತಿಳಿಸಿದರು   

ಅವರು ಇಲ್ಲಿನ ಸಮೀಪದ ಕೆಲವಡಿ ಬಳಿ ಇರುವ ಸಂಗಮೇಶ್ವರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಏರಿ​‍್ಡಸಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.  

 1956 ರಲ್ಲಿ ಭಾಷಾವಾರು ಪ್ರಾಂತ್ಯಗಳನ್ನು ಒಟ್ಟುಗೂಡಿಸಿ ಮೈಸೂರು ರಾಜ್ಯ ಸ್ಥಾಪನೆಯಾದಾಗ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿತ್ತು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸುರವರು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದ ನಂತರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಇಂದು  ವಿಶ್ವದಲ್ಲಿ 10 ಕೋಟಿಗೂ ಹೆಚ್ಚು ಜನರು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದಾರೆ. ರಾಮಾಯಣ ಮತ್ತು ಮಹಾಭಾರತದ ಕಾಲದಿಂದಲೂ ಕನ್ನಡ ಭಾಷೆ ಇತ್ತು ಎಂದು ಇತಿಹಾಸಕಾರರು ಗುರುತಿಸಿದ್ದಾರೆ ಹಾಗಾಗಿ ಕನ್ನಡ ಭಾಷೆಯು 7000 ವರ್ಷಗಳಿಗಿಂತ ಹೆಚ್ಚು ಇತಿಹಾಸ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ತಿಳಿಸಿದರು.  

 ಇಂತಹ ಸಾಂಸ್ಕೃತಿಕ ಹಿನ್ನೆಲೆಯನ್ನ ಹೊಂದಿರುವ ಕನ್ನಡ ಭಾಷೆಯು ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನ ಪಡೆದಿದೆ. ಅಲ್ಲದೆ ಕನ್ನಡ ಸಾಹಿತ್ಯವು ಸಹ ವಿಶೇಷವಾಗಿ ಬೆಳವಣಿಗೆ ಹೊಂದಿದೆ. ಅಲ್ಲದೆ ವಚನ ಸಾಹಿತ್ಯ ಎಂಬ ಸಾಹಿತ್ಯ ಪ್ರಕಾರವು ವಿಶ್ವದ ಯಾವ ಸಾಹಿತ್ಯ ಪ್ರಕಾರದಲ್ಲೂ ಕಂಡು ಬರದೇ ಇರುವಂತಹ ವಿಶೇಷತೆಯನ್ನ ಹೊಂದಿದೆ. ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀಶಿವಾನಂದ ಹಿಪ್ಪರಗಿಯವರು ಮಾತನಾಡುತ್ತಾ. ಇಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ  ಅಭಿವೃದ್ಧಿ ಕಾರ್ಯಗಳು ಕೊರತೆ ಎದ್ದು ಕಾಣುತ್ತಿದೆ. ಗೂಗಲ್ ನಂತಹ ಅಭಿವೃದ್ಧಿ ಯೋಜನೆಗಳು ರಾಜ್ಯದಿಂದ ಕೈತಪ್ಪಿ ಹೋಗುತ್ತಿವೆ. ಉತ್ತರ ಕರ್ನಾಟಕದ ಅಭಿವೃದ್ಧಿಯು ಕುಂಟುತ್ತಾ ಸಾಗುತ್ತಿದೆ ಎಂದು ಅಭಿಪ್ರಾಯ ಪಟ್ಟರು.  

ಸಮಾರಂಭದಲ್ಲಿ ವಿದ್ಯಾಲಯದ ಸಿಬ್ಬಂದಿಗಳಾದ ಶರತ್ ಕುಮಾರ ಕೊಟ್ಟೂರ ಶೆಟ್ಟರ, ಸಂಜೀವ ಅರಗೋಳ, ಆನಂದ ಹನಗಂಡಿ, ಪ್ರಶಾಂತ್ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಆನಂದ್ ಗುರಿಕೇರ ಮಾತನಾಡಿದಳು   

ಸಂಸ್ಥೆಯ ಅಧ್ಯಕ್ಷ ಮಹೇಶ್ ಎಸ್ ಇಜೇರಿಯವರು ಉದ್ಘಾಟಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಸಿದ್ದು ಸರವಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.   

 ವಿದ್ಯಾರ್ಥಿಗಳು ಪ್ರಾರ್ಥಿಸಿ ನಾಡಗೀತೆ ಹಾಡಿದರು. ಸಿಂಚನ ನಿರೂಪಿಸಿದಳು, ಸಂಯೂನ್ ವಂದಿಸಿದಳು. ಸಮಾರಂಭದಲ್ಲಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.