ಲೋಕದರ್ಶನ ವರದಿ
ಖಾನಾಪುರ: ಪಟ್ಟಣದಲ್ಲಿ ಭಾನುವಾರ ಜರುಗಿದ ಸಕರ್ಾರಿ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದ ನಾಮಫಲಕದಲ್ಲಿ ಕನ್ನಡ ಭಾಷೆಯ ಪದಗಳನ್ನು ತಪ್ಪಾಗಿ ನಮೂದಿಸುವ ಮೂಲಕ ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳ್ಕರ ಕನ್ನಡ ನಾಡು-ನುಡಿಗೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿರುವ ಕನರ್ಾಟಕ ರಕ್ಷಣಾ ವೇದಿಕೆ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಶಾಸಕಿ ನಿಂಬಾಳ್ಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿತು.
ಪಟ್ಟಣದ ಬಸವೇಶ್ವರ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಶಾಸಕಿ ಡಾ.ಅಂಜಲಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ತಹಸೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ, ಉಪಾಧ್ಯಕ್ಷ ವಿಠ್ಠಲ ಹಿಂಡಲಕರ, ಕಾರ್ಯದಶರ್ಿ ದಶರಥ ಬನೋಶಿ, ಬಸವರಾಜ ಬಡಿಗೇರ, ಭರತೇಶ ಜೋಳದ, ಮಲ್ಲಿಕಾಜರ್ುನ ಹೊಸೂರಿ ಮತ್ತಿತರರು ಇದ್ದರು.