ಲೋಕದರ್ಶನ ವರದಿ
ಕುಕನೂರು 04: ಕನ್ನಡ ಸಾಹಿತ್ಯ ಸಮ್ಮೇಳನಗಳು, ನಾಡು, ನುಡಿ ಅಭಿವದ್ಧಿಗೆ ಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳಲು ವೇದಿಕೆಯಾಗಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಅಂಗಡಿ ಹೇಳಿದರು.
ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದ ಸಭಾಭವನದಲ್ಲಿ ಮಂಗಳವಾರ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು. ಅಪೂರ್ವ ಸಂಜೀವಿನಿ ಮಹಿಳಾ ಒಕ್ಕೂಟದ ಸರ್ವ ಸದಸ್ಯರು ಸಮ್ಮೇಳನ ಯಶಸ್ವಿಯಾಗುವಲ್ಲಿ ತಮ್ಮ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಗೌರಮ್ಮ ನಾಗನೂರು ಮಾತನಾಡಿ, ನಮ್ಮ ಮಹಿಳಾ ಸಂಘಟನೆಯ ಎಲ್ಲ ಸರ್ವ ಸದಸ್ಯರು ಈ ಸಾಹಿತ್ಯ ಸಮ್ಮೇಳನ ಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿಕೊಡುತ್ತೇವೆ ಎಂದು ಎಲ್ಲರ ಪರವಾಗಿ ನಿಮಗೆ ಭರವಸೆ ನೀಡುತ್ತೇನೆ ಎಂದರು.
ಮುಖಂಡ ಯಂಕರಡ್ಡಿ ಯರಾಶಿ ಮಾತನಾಡಿ, ಇದುವರೆಗೆ ಯಾವುದೇ ಸಾಹಿತ್ಯ ಸಮ್ಮೇಳನ ಗ್ರಾಮದಲ್ಲಿ ಹಮ್ಮಿಕೊಂಡಿಲ್ಲ. ಮೊದಲ ಬಾರಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ. ಈ ಸಮ್ಮೇಳನದ ಯಶಸ್ವಿಗೆ ಎಲ್ಲರೂ ಸಹಕರಿಸುತ್ತೇವೆ ಎಂದರು. ಮಹಾಬಳೇಶಪ್ಪ ಮಾಳೆಕೊಪ್ಪ, ನಿಂಗಪ್ಪ ಚೌಡಿ, ಮಲ್ಲಿಕಾಜರ್ುನ್, ಹಾಲೇಶ ಯರಾಶಿ, ನಿಲಮ್ಮ ಕರಮುಡಿ ಇದ್ದರು. ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಮಂಗಳವಾರ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಅಂಗಡಿ ಮಾತನಾಡಿದರು.