ಕಾರವಾರದಲ್ಲಿ 65ನೇ ಕನ್ನಡ ರಾಜ್ಯೋತ್ಸವ : ಹಲವು ಸಂಸ್ಕೃತಿಗಳ ತವರು ಉತ್ತರ ಕನ್ನಡ

ಕಾರವಾರದಲ್ಲಿ  65ನೇ ಕನ್ನಡ ರಾಜ್ಯೋತ್ಸವ : 
ಹಲವು ಸಂಸ್ಕೃತಿಗಳ ತವರು ಉತ್ತರ ಕನ್ನಡ 

ಕಾರವಾರ :  ಹಲವು ಸಂಸ್ಕೃತಿಗಳ ತವರು ಉತ್ತರ‌ ಕನ್ನಡ ಜಿಲ್ಲೆಯೆಂದು ಸಚಿವ‌ ಹೆಬ್ಬಾರ್ ಹೇಳಿದರು.
ಕಾರವಾರದಲ್ಲಿ ‌ 65ನೇ ಕರ್ನಾಟಕ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಪೊಲೀಸ್ ಪರೇ
ಡ್ ಮೈದಾನದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ‌ ಚಾಲನೆ‌ ನೀಡಿದರು.
 
ಕನ್ನಡ ನಾಡಿನ ಎಲ್ಲಾ ಸಂಸ್ಕೃತಿ  ಮತ್ತು ಆಚರಣೆಗಳನ್ನು ಹೊಂದಿರುವ ಏಕೈಕ ಜಿಲ್ಲೆಯೆಂದರೆ ಅದು ಉತ್ತರ ಕನ್ನಡ ಜಿಲ್ಲೆ. ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆಯನ್ನು ಹೊಂದಿರುವ ನಮ್ಮ ಜಿಲ್ಲೆ ಅಪಾರ ವೈವಿದ್ಯಗಳನ್ನು ಮೇಳೈಸಿಕೊಂಡಿರುವ ಜಿಲ್ಲೆ ಎಂದು ಹೆಮ್ಮೆಯಿಂದ ಹೇಳಬಹುದಾಗಿದೆ. ಇಲ್ಲಿನ ವಿವಿಧ ಜನ ಸಮುದಾಯಗಳ ಸಂಪ್ರದಾಯ, ಜಾನಪದ ಕಲೆ, ಸಾಹಿತ್ಯ ಸಮೃದ್ಧಿಯಾಗಿದೆ. ವಿಶೇಷವಾಗಿ ಸಿದ್ದಿ, ಟಿಬೆಟಿಯನ್, ಗೊಂಡ, ಹಾಲಕ್ಕಿ, ಗೌಳಿ ಹೀಗೆ ವಿವಿಧ ಸಮುದಾಯಗಳ ಜಾನಪದ ಕಲೆಗಳನ್ನು ಪೋಷಿಸಲಾಗಿದೆ. ಈ ಹಿಂದೆ ಏಕೀಕರಣ ಸಂದರ್ಭದಲ್ಲಿ  ಜಿಲ್ಲೆ ನೀಡಿದ ಕೊಡುಗೆಯನ್ನು ಮರೆಯಲಾಗದು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಹಲವಾರು ಸೊಬಗನ್ನು ಹೊಂದಿರುವ ಕರ್ನಾಟಕದ ವೈವಿಧ್ಮಯ ಜಿಲ್ಲೆಯೆಂದು ಪ್ರತಿಪಾದಿಸಲಾಗಿದೆ. ಅದು ಇಂದಿಗೂ ಉಳಿದಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
 ಜಿಲ್ಲೆಯ ಜನತೆ ಅತ್ಯಂತ ಪ್ರಜ್ಞಾವಂತರು, ಈ ನೆಲದ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತ  ಮತ್ತು ಪರಂಪರೆಯನ್ನು ಎಂದೂ ಆರಾಧಿಸುವವರು. ಇಂತಹ ಸಹೃದಯಿ ಬಂಧುಗಳ ಅಭೀಷ್ಟೆಯಂತೆ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಸರ್ಕಾರ ವಿಶೇಷ ಗಮನಹರಿಸಿ, ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಇಲ್ಲಿನ ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯನ್ನು ಸದೃಢವಾಗಿ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಹೇಳಿದರು. 
 ಕಾರ್ಯಕ್ರಮದಲ್ಲಿ  ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರೀಕ ಪೊಲೀಸ್ ತುಕಡಿ, ಕಾರವಾರ ಅರಣ್ಯ ಇಲಾಖೆ ಹಾಗೂ ಚೆಂಡಿಯಾ ಘಟಕದ ಗೃಹ ರಕ್ಷಕದಳದ ತುಕಡಿಗಳು  ಮಾತ್ರ ಕವಾಯತನಲ್ಲಿ ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಚಿತ್ತಾಕುಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶೈಲಾ ಸಾಳುಂಕೆ ನಿರೂಪಿಸಿದರು.
 ರಾಜ್ಯೋತ್ಸವ ‌ಸಮಾರಂಭದಲ್ಲಿ  ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ್ , 
ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ಕಾರವಾರ ಉಪವಿಭಾಗಾಧಿಕಾರಿ ಎಂ.ಪ್ರಿಯಾಂಗಾ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು, ಕನ್ನಡ ಪರ ಸಂಘಟನೆಗಳು, ಕನ್ನಡಾಭಿಮಾನಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.