ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Kannada film song singing program on April 24th as part of Dr. Rajkumar's birthday celebration

ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

ಬಳ್ಳಾರಿ 22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಏ.24 ರಂದು ಸಂಜೆ 05.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಡಾ.ರಾಜ್ ಕುಮಾರ್ ಅವರ ಕುರಿತ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. 

ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳು, ಕನ್ನಡ ಕಲಾಪ್ರೇಮಿಗಳು, ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿ-ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.