ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನುಡಿ ಕನ್ನಡ : ಪ್ರೋ.ಎನ್.ಬಿ.ಪಾಟೀಲ
Kannada is a language with a history of thousands of years: Prof. N.B. Patil
ಮಹಾಲಿಂಗಪುರ 30: ನಮ್ಮ ರಾಜ್ಯ ಶ್ರೀಮಂತಿಕೆಯಿಂದ ಇರಲು ಕಲೆ,ಸಾಹಿತ್ಯ, ಸಂಸ್ಕೃತಿಗಳೆ ಕಾರಣ, ಕಲೆ ಸಾಹಿತ್ಯದ ಅಭಿರುಚಿಯನ್ನು ವಿದ್ಯಾರ್ಥಿಗಳು ಬೆಳಸಿಕೋಳ್ಳಬೇಕು, ನಮ್ಮ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಮರೆಯಬಾರದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಾಡಿನ ನುಡಿ ಕನ್ನಡ ಎಂದು ಪ್ರೋ.ಎನ್.ಬಿ.ಪಾಟೀಲ ಹೇಳಿದರು.
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್ ಸಿ ಪಿ ಕಲಾ, ವಿಜ್ಞಾನ ಮತ್ತು ಡಿ. ಡಿ. ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ವಿಭಾಗದ ವತಿಯಿಂದ ಕನ್ನಡ ರಾಜೋತ್ಸವ ನಿಮಿತ್ಯವಾಗಿ ಮೂರು ದಿನಗಳ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡುತ್ತಾ ನಾವೇಲ್ಲರೂ ಕನ್ನಡ ಭಾಷೆ ಮಾತನಾಡುತ್ತ ಅದನ್ನು ಉಳಿಸಿ ಬೆಳಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ, ನಮ್ಮ ಪೂರ್ವಿಕರು ಕನ್ನಡ ಭಾಷೆಗಾಗಿ ಶ್ರಮಿಸಿದ್ದಾರೆ ಅವರ ಶ್ರಮದ ಫಲವಾಗಿ ಕನ್ನಡ ಭಾಷೆ ಶ್ರೀಮಂತವಾಗಿದೆ. ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಹೊರತೆಗೆಯಲು ಇತರಹದ ಕಾರ್ಯಕ್ರಮಗಳು ಸಹಾಯಕಾರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಹ ಸಂಯೋಜಕ ಎಸ್.ಎಸ್.ಮುಗಳ್ಯಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಪರಿಚಯಿಸಲು ನಮ್ಮ ಮಹಾವಿದ್ಯಾಲಯ ಎಲ್ಲ ಸೌಲಭ್ಯಗಳನ್ನು ನೀಡುತ್ತಿದೆ, ಕನ್ನಡ ನಾಡು ನುಡಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.
ಮೂರು ದಿನದ ಕಾರ್ಯಕ್ರಮದಲ್ಲಿ ಮೊದಲನೇ ದಿನ ಕನ್ನಡ ನಾಡು ನುಡಿ ಕುರಿತು ಗಾಯನ ಸ್ಪರ್ಧೆ ಎರಡನೇ ದಿನ ಭಾಷಣ ಹಾಗೂ ಮೂರನೇ ದಿನ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಆಯ್.ಸಿ.ಶಿರೋಳ, ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಾಂಸ್ಕೃತಿಕ ವಿಭಾಗದ ಮುಖಸ್ಥರಾದ ಪಿ.ಎಮ್.ಮನಗಾಂವಿ ಸ್ವಾಗತಿಸಿ ಪುಷ್ಪರ್ಚನೆ ನಡೆಸಿದರು. ಶಂಕರ ಪಾಟೀಲ ವಂದಿಸಿದರು. ಪಿ.ಎಮ್.ಮುತ್ನಾಳಿ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 