ಕತಾರ 13: ಕತಾರಿನಲ್ಲಿ ಸಿಗ್ದಾ ಪ್ರಶಸ್ತಿ ಪಡೆದ ಕನ್ನಡಿಗ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಇತ್ತೀಚಿಗೆ ಕತಾರಿನಲ್ಲಿರುವ ದೋಹಾದಲ್ಲಿ ನಡೆದ ’ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ ಪ್ರಧಾನ ಸಮಾರಂಭ 2024 ರಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಸಮುದಾಯ ಸಮರ್ಥ ಸೇವಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಸಮುದಾಯದ ಅಭ್ಯುದಯಕ್ಕೆ ಶ್ರೀಯುತರ ಕೊಡುಗೆ ಮುಂದುವರೆಯಲಿ ಎಂದು ಹಾರೈಸೋಣ. ಶ್ರೀಯುತರು ಕತಾರಿನಲ್ಲಿ ಕಳೆದ 17 ವರ್ಷಗಳಿಗಿಂತ ಹೆಚ್ಚು ಕಾಲ ವಾಸಿಸುತ್ತಿದ್ದು ಹಲವಾರು ಸಾಮಾಜಿಕ, ಸಾಂಸ್ಕೃತಿಕ, ಹಾಗು ಕ್ರೀಡಾ ಕಾರ್ಯಕ್ರಮಗಳಲ್ಲಿ. ತಮ್ಮನ್ನು ತಾವು ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿರುವರು.