ದೇವರಹಿಪ್ಪರಗಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ
Karahunnime celebration in Devarahipparagi
ದೇವರಹಿಪ್ಪರಗಿ 11: ಕಾರ ಹುಣ್ಣಿಮೆ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರೈತರು ಬುಧವಾರದಂದು ಎತ್ತುಗಳನ್ನು ವಿಶೇಷವಾಗಿ ಸಿಂಗರಿಸಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಪಟ್ಟಣದಲ್ಲಿ ಎತ್ತುಗಳಿಗೆ ಅಲಂಕಾರಿಕ ಬಣ್ಣಗಳನ್ನು ಹಚ್ಚಿ, ಕೋಡಣಸು, ಜೂಲುಗಳನ್ನು ಹಾಕಿ ಸಿಂಗರಿಸಲಾಗಿತ್ತು. ಸಂಜೆ ಪಟ್ಟಣದ ಮೇನ್ ಬಜಾರ್ ರಥದ ಮುಂದೆ ಸಾಂಪ್ರದಾಯಿಕವಾಗಿ ಎತ್ತುಗಳನ್ನು ಒಟ್ಟುಗೂಡಿಸಿ ಎತ್ತಿನ ಕೋಡು ಮತ್ತು ಕೊರಳಿಗೆ ಕಡುಬು, ವಡೆ, ಕರಚಿಕಾಯಿ, ಶೇಂಗಾಕಾಯಿ , ಕೊಬ್ಬರಿ ಬಟ್ಟಲು ಸೇರಿದಂತೆ ವಿವಿಧ ಖಾದ್ಯ ಪದಾರ್ಥಗಳನ್ನು ಕಟ್ಟಿ ಸಾಲಾಗಿ ನಿಲ್ಲಿಸಲಾಗಿತ್ತು. ಎತ್ತುಗಳಿಗೆ ಪೂಜೆ ಸಲ್ಲಿಸಿದ ನಂತರ ಎರಡು ಎತ್ತುಗಳಿಗೆ ಮುಂಗಾರು ಮತ್ತು ಹಿಂಗಾರು ಎಂದು ನಾಮಕರಣ ಮಾಡಿ ಐದು ಬಾರಿ ಓಡಿಸಲಾಯಿತು.
ಇದೇ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಂಪತ್ ಜಮಾದಾರ, ವೀರೇಶ ಕುದರಿ, ಮಹೇಶ ಅವಟಿ ಸೇರಿದಂತೆ ಯುವಕರು,ಗ್ರಾಮದ ಪ್ರಮುಖರು, ಗಣ್ಯರು ಹಾಗೂ ರೈತರು ಉಪಸ್ಥಿತರಿದ್ದರು .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 