ಬೆಂಗಳೂರು, ಏ 4, ಡಾ. ಬಾಬು ಜಗಜೀವನ್ ರಾಮ್ , ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ರಾಷ್ಟ್ರಾದ್ಯಂತ ಲಾಡ್ ಡೌನ್ ಅನುಷ್ಠಾನದಲ್ಲಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಏ.5 ರಂದು ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಹಾಗೂ ಏ.14 ರಂದು ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಹೆಚ್ಚಿನ ಸಂದಣಿ ಸೇರದಂತೆ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಬಾಬು ಜಗಜೀನ್ ರಾಮ್ ಜಯಂತಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಈ ಮಹಾನ್ ಚೇತನರ ಅಭಿಮಾನಿಗಳು , ಅನುಯಾಯಿಗಳು ಸಹಕರಿಸಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಮನವಿ ಮಾಡಿದ್ದಾರೆ.