ಪಾಲಿಕೆಯಲ್ಲಿ ಕನ್ನಡ ವಿರೋಧಿ ಚಟುವಟಿಕೆ ನಡೆಸದಂತೆ ಆಗ್ರಹಿಸಿ ಕರವೇ ಮನವಿ
Karave appeals to stop anti-Kannada activities in the corporation
ಬೆಳಗಾವಿ 17: ಮಹಾರಾಷ್ಟ್ರ ಏಕೀಕರಣ ಸಮೀತಿಯ ಪುಂಡಾಟಿಕೆಗೆ ಮಣಿದು ಪಾಲಿಕೆಯಲ್ಲಿ ಕನ್ನಡ ವಿರೋಧಿ ಚಟುವಟಿಕೆಯನ್ನು ನಡೆಸಬಾರದು ಎಂದು ಆಗ್ರಹಿಸಿ ಕರವೇ(ನಾರಾಯಣಗೌಡ ಬಣ) ಜಿಲ್ಲಾ ಘಟಕದ ವತಿಯಿಂದ ಪಾಲಿಕೆ ಮೇಯರ ಮಂಗೇಶ ಪವಾರ ಅವರಿಗೆ ಅವರಿಗೆ ಮನವಿ ಸಲ್ಲಿಸಿದರು.
ಗುರುವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮೇಯರ ಮಂಗೇಶ ಪವಾರ ಹಾಗೂ ಉಪಮೇಯರ ವಾಣಿ ಜೋಶಿ ಅವರನ್ನು ಭೇಟಿಯಾಗಿ ಬೆಳಗಾವಿ ಮಹಾನಗರದಲ್ಲಿ ಸರ್ಕಾರದ ಆದೇಶದ ಪ್ರಕಾರ ಕನ್ನಡವನ್ನು ಕಡ್ಡಾಯಗೊಳಸುವ ಎಲ್ಲ. ಕ್ಷೇತ್ರಗಳಲ್ಲಿ ಕನ್ನಡದ ಅನುಷ್ಠಾನ ಮಾಡುವ ಕಾರ್ಯ ನಡೆದಿದೆ ಮಹಾರಾಷ್ಟ್ರ ಏಕೀಕರಣ ಸಮೀತಿಯ ಮುಖಂಡರ ತಮ್ಮನ್ನು ಭೇಟಿಯಾಗಿ ಕನ್ನಡದ ಫಲಕಗಳನ್ನು ತೆರವು ಮಾಡುವಂತೆ ಫುಂಡಾಟಿಕೆ ನಡೆಸಿದ್ದು, ಯಾವುದೇ ಕಾರಣಕ್ಕೂ ತಾವು ಅವರ ಪುಂಡಾಟಿಕೆಗೆ ಮಣಿದು ಕನ್ನಡ ವಿರೋಧಿ ಚಟುವಟಿಕೆ ನಡೆದರೆ ಪಾಲಿಕೆಗೆ ಮುತ್ತಿಗೆ ಹಾಕಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಎಂಈಎಸ್ ಮುಖಂಡರ ಪುಂಡಾಟಿಕೆಗೆ ಹೆದರದೇ ಕನ್ನಡ ಕಡ್ಡಾಯಗೊಳಿಸಬೇಕು. ಯಾವುದೇ ಕಾರಣಕ್ಕೂ ತಾವು ಮಹಾನಗರ ಪಾಲಿಕೆಯಲ್ಲಿ ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವದು ಎಂದು ಎಚ್ಚರಿಸಿದರು.
ಮೇಯರ ಮಂಗೇಶ ಪವಾರ ಮಾತನಾಡಿ, ಕೆಲವೊಂದು ಖಾಸಗಿಯವರು ಜಾಹೀರಾತುಗಳನ್ನು ಅಂಟಿಸುತ್ತಾರೆ. ಈ ಸಂಬಂಧ ಆಯುಕ್ತರೊಂದಿಗೆ ಮಾತನಾಡುವುದಾಗಿ ಹೇಳಿದರು.
ಮನವಿ ಅರ್ಪಿಸುವಾಗ ಸುರೇಶ ಗವಣ್ಣವರ, ಗಣೇಶ ರೊಕಡೆ, ಮಂಜುನಾಥ ರಾಠೋಡ, ರಮೇಶ ಯರಗಣ್ಣವರ, ವಿನಾಯಕ ಭೋವಿ, ಲೋಕೇಶ ರಾಠೋಡ ಸೇರಿದಂತೆ ಕರವೇ ಕಾರ್ಯಕರ್ತರು ಇದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 