ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಕರವೇ ಆಗ್ರಹ
Karave demands opening of maize purchasing centers in taluk centers
ದೇವರಹಿಪ್ಪರಗಿ 05: ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗಿದೆ. ಮಾರುಕಟ್ಟೆಗೆ ಜೋಳ ಬಂದು ಹಲವು ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರ ಆರಂಭ ಮಾಡಿಲ್ಲ. ಇದು ಖಂಡನೀಯ.
ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ)ಬಣದ ತಾಲೂಕು ಗೌರವಾಧ್ಯಕ್ಷರಾದ ಪ್ರಕಾಶ ಡೊಣೂರಮಠ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪಟ್ಟಣದ ಸಮೀಪವಿರುವ ಸಾತಿಹಾಳ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಯಾವುದೇ ಶರತ್ತುಗಳಿಲ್ಲದೆ ರೈತರು ಬೆಳೆದಿರುವ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು ಹಾಗೂ ಇಲ್ಲಿರುವ ಗೊಂದಲಗಳನ್ನು ನಿವಾರಿಸಬೇಕು. ಧಾರವಾಡಕ್ಕೆ ಸ್ಯಾಂಪಲ್ ಕಳಿಸಲು ಸಾಧ್ಯವಾಗುವುದಿಲ್ಲ. ವಿಜಯಪುರ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡಿ ಬೆಂಬಲ ಬೆಲೆಯ ಮೂಲಕ ರೈತರ ಖಾತೆಗೆ ಹಣ ಜಮಾ ಮಾಡಬೇಕು ಇಲ್ಲದಿದ್ದರೆ ಬರುವಂತ ದಿನಗಳಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ರೈತರ ಜೊತೆಗೂಡಿ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಬೇಕಾಗುತ್ತದೆ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷರಾದ ವಿಜಯಕುಮಾರ ಯಂಬತ್ನಾಳ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 